ಪಾಟ್ನಾ, ಸೆ.20- ಬಿಹಾರದ ವಿವಿಧ ಭಾಗಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 11 ಮಂದಿ ಸಾವನ್ನಪ್ಪಿದ್ದು,
ಕಳದ 2 ದಿನದಲ್ಲಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ ತಲಾ ನಾಲ್ವರು ಮತ್ತು ಸುಪೌಲನಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಜನಜೀವನ ಅಸ್ತವ್ಯಸವಾಗಿದ್ದು ಮಹಾ ಮಳೆಗೆ ಗಾಮೀಣ ಪ್ರದೇಶದ ಜನರು ಬೆಚ್ಚಿಬಿದ್ದಿದ್ದಾರೆ ಸಂತ್ರಸ್ತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿ, ಮೃತರ ಸಂಬಂಧಿಕರಿಗೆ ತಕ್ಷಣವೇ 4 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ.
ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅವಘಡಗಳನ್ನು ತಪ್ಪಿಸಲು ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು. ಕೆಟ್ಟ ಹವಾಮಾನದಲ್ಲಿ ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ ಎಂದು ಅವರು ಹೇಳಿದ್ದಾರೆ.