ಅಪ್ರಾಪ್ತೆಯರಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಸೆಕ್ಸ್ ದಂಧೆಗಿಳಿಸುತ್ತಿದ್ದ ಜಾಲ ಪತ್ತೆ..!

Girl-Injection--01

ಹೈದರಾಬಾದ್, ಆ.1-ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಸೆಕ್ಸ್ ದಂಧೆಗೆ ಬಳಸಿಕೊಳ್ಳುತ್ತಿದ್ದ ಜಾಲವೊಂದನ್ನು ತೆಲಂಗಾಣ ಪೊಲೀಸರು ಭೇದಿಸಿದ್ದಾರೆ. ಈ ಹೀನ ಕೃತ್ಯದ ಸಂಬಂಧ ಆರು ಮಹಿಳೆಯರೂ ಸೇರಿದಂತೆ ಎಂಟು ದಂಧೆಕೋರರನ್ನು ಬಂಧಿಸಲಾಗಿದೆ.   ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಿಗೆ ಹಾರ್ಮೋನ್ ಲಸಿಕೆ ನೀಡಿ ಅವರನ್ನು ಸೆಕ್ಸ್ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು.

ಈ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು 12ಕ್ಕೂ ಹೆಚ್ಚು ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರಲ್ಲಿ ನಾಲ್ವರು ಏಳು ವರ್ಷಕ್ಕಿಂತ ಚಿಕ್ಕ ಮಕ್ಕಳು ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.   ಬಡ ಕುಟುಂಬದ ಹೆಣ್ಣು ಮಕ್ಕಳನ್ನು 1 ರಿಂದ 2 ಲಕ್ಷ ರೂ.ಗಳಿಗೆ ಖರೀದಿಸಿ ಅವರನ್ನು ಈ ದಂಧೆಗೆ ದೂಡಲಾಗುತ್ತಿತ್ತು. 10 ವರ್ಷಕ್ಕಿಂತ ಕಡಿಮೆ ವಯೋಮಾನದ ಹೆಣ್ಣು ಮಕ್ಕಳಿಗೆ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಮತ್ತು ಸಾಮಥ್ರ್ಯ ಹೆಚ್ಚಿಸಲು ಹಾರ್ಮೋನ್ ಇಂಜೆಕ್ಷನ್‍ಗಳನ್ನು ನೀಡಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಸಂಬಂಧ ಬಂಧಿತರಾದ ಆರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ವ್ಯವಸ್ಥಿತ ಜÁಲದಲ್ಲಿ ಮತ್ತಷ್ಟು ಮಂದಿ ಶಾಮೀಲಾಗಿರುವ ಶಂಕೆ ಇದ್ದು, ತನಿಖೆ ತೀವ್ರಗೊಂಡಿದೆ.

Sri Raghav

Admin