ಟ್ರಕ್-ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವು

Accicent--011
ನಾಗ್ಪುರ, ಡಿ.9 (ಪಿಟಿಐ)- ಟ್ರಕ್ ಮತ್ತು ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಏಳು ಮಹಿಳೆಯರು ಮತ್ತು ಇಬ್ಬರು ಮಕ್ಕಳೂ ಸೇರಿದಂತೆ 11 ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಚಂದ್ರಾಪುರ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಕೊರ್ಪಾನಾ-ವನಿ ರಸ್ತೆಯಲ್ಲಿ ನಿನ್ನೆ ರಾತ್ರಿ 9.45ರಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 14 ಜನರಿದ್ದ ಈ ವ್ಯಾನ್ ಮತ್ತು ಎದುರು ದಿಕ್ಕಿನಿಂದ ಬಂದ ಟ್ರಕ್ ನಡುವೆ ಅಪಘಾತ ಸಂಭವಿಸಿತು. ಈ ದುರ್ಘಟನೆಯಲ್ಲಿ ವ್ಯಾನ್‍ನಲ್ಲಿದ್ದ ಏಳು ಮಹಿಳೆಯರು, ಒಬ್ಬ ಪುರುಷ, ಚಾಲಕ, ಮೂರು ವರ್ಷದ ಮಗು ಮತ್ತು ಮತ್ತೊಂದು ಮಗು ಸ್ಥಳದಲ್ಲೇ ಮೃತಪಟ್ಟರು ಎಂದು ಚಂದ್ರಾಪುರ್ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ವರ್ ರೆಡ್ಡಿ ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಶೋಚನೀಯವಾಗಿದೆ. ಅಪಘಾತದ ನಂತರ ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

Sri Raghav

Admin