ಮದುವೆ ಮುಗಿಸಿ ಬರುತ್ತಿದ್ದ ವಾಹನ ಪ್ರಪಾತಕ್ಕೆ ಬಿದ್ದು 11 ಜನರ ದುರ್ಮರಣ..!

Social Share

ಖಾತಿಮಾ (ಉತ್ತರಾಖಂಡ), ಫೆ.22- ಮದುವೆ ಸಂಭ್ರಮ ಮುಗಿಸಿ ಹಿಂದಿರುಗುತ್ತಿದ್ದ ವಾಹನವೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ 11 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ 3 ಗಂಟೆ ಸುಮಾರಿನಲ್ಲಿ ವಾಪಸಾಗುತ್ತಿದ್ದ ವೇಳೆ ಮ್ಯಾಕ್ಸ್ ವಾಹನ ಚಂಪವಾತ್ ಜಿಲ್ಲೆಯ ಸುಖೀಗಾನ್ ದಂಡಮಿನಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿ ಆಳವಾದ ಕಮರಿಗೆ ಬಿದ್ದಿದೆ.
ಈ ಸಂದರ್ಭದಲ್ಲಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಚಂಪಾವಾತ್ ಜಿಲ್ಲೆಯ ಕನಕಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.  ಮಾಹಿತಿ ತಿಳಿದ ಕೂಡಲೇ ರಕ್ಷಣಾ ಪಡೆಗಳು ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Articles You Might Like

Share This Article