ಬೆಂಗಳೂರು, ಜ.20- ಹನ್ನೊಂದು ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಿನ್ನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಳ್ಳು ಗಾಡಿನಲ್ಲಿ ಗಂಧಿಗೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 70 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ನಿನ್ನೆ ದೇವಸ್ಥಾನದಿಂದ ಬಾಲಕ ಪ್ರಸಾದ ತೆಗೆದುಕೊಂಡು ಮನೆಗೆ ಹೋಗುವ ವೇಳೆ ವೃದ್ಧ ಆತನನ್ನು ಪುಸಲಾಯಿಸಿ ಟೆಂಟ್ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ನಂತರ ಮನೆಗೆ ಬಂದ ಬಾಲಕ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾನೆ. ಆತಂಕಕ್ಕೊಳಗಾದ ಪೋಷಕರು ಈ ಬಗ್ಗೆ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ತನಿಖೆಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.