ಸಾರಿಗೆ ನಿಗಮಗಳಿಗೆ 1200 ಹೊಸ ಬಸ್ ಖರೀದಿ

Social Share

ಬೆಂಗಳೂರು,ಫೆ.17- ರಾಜ್ಯದ ಸಾರಿಗೆ ನಿಗಮಗಳಿಗೆ ಮುಂದಿನ ವರ್ಷ ಹೊಸದಾಗಿ 1200 ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಬಜೆಟ್ನಲ್ಲಿ 500 ಕೋಟಿ ರೂಪಾಯಿಗಳ ನೆರವು ಘೋಷಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಸಾರಿಗೆ ನಿಗಮಗಳ ಪುನಶ್ಚೇತನದ ಚರ್ಚೆ ನಡೆಸಲಾಗಿದೆ. ಕಳೆದ ಸಾಲಿನಲ್ಲಿ 3,526 ಹೊಸ ಬಸ್ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ.

ಮುಂದಿನ ವರ್ಷ 1200 ಹೊಸ ಬಸ್ಗಳನ್ನು ಖರೀದಿಸಲು 500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಸರ್ಕಾರ ಹೊಸ ಬಸ್ಗಳ ಖರೀದಿಗೆ ಭಾರೀ ಪ್ರಮಾಣದ ನೆರವು ನೀಡುತ್ತಿದೆ ಎಂದು ತಿಳಿಸಿದ್ದಾರೆ.

ವಾಯು ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸಾರಿಗೆ ನಿಗಮಗಳಲ್ಲಿ ಈಗಾಗಲೇ ವಿದ್ಯುತ್ ಚಾಲಿತ ಬಸ್ಗಳನ್ನು ಅಳವಡಿಸಲು ಆರಂಭಿಸಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 1,311 ಮತ್ತು ಕೆಎಸ್ಆರ್ಟಿಸಿಯಲ್ಲಿ 50 ಬಸ್ಗಳು ಕಾರ್ಯಾಚರಿಸುತ್ತಿವೆ. ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಒಂದು ಕೋಟಿ ರೂಪಾಯಿ ಮೊತ್ತದ ವಿಮಾ ಯೋಜನೆ ಸೌಲಭ್ಯ ಜಾರಿಗೆ ತರಲಾಗಿದೆ. ರಸ್ತೆ ಸಾರಿಗೆ ನಿಗಮಗಳಲ್ಲಿನ ವ್ಯವಸ್ಥೆಯನ್ನು ಸುಧಾರಿಸುವ ಹಾಗೂ ನಿಗಮಗಳನ್ನು ಬಲಪಡಿಸುವ ಉದ್ದೇಶದಿಂದ ರಚಿಸಲಾಗಿದ್ದ ಎಂ.ಆರ್.ಶ್ರೀನಿವಾಸ ಮೂರ್ತಿ ಸಮಿತಿಯ ವರದಿಯ ಪೈಕಿ ಕೆಲವನ್ನು ಅನುಷ್ಠಾನಕ್ಕೆ ತರಲಾಗುತ್ತಿದ್ದು, ನಿಗಮಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣೆ ಸೇರಿದಂತೆ ವಿವಿಧ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕಳೆದ ವರ್ಷ 2,335 ಕೋಟಿ ರೂಪಾಯಿಗಳನ್ನು ಒದಗಿಸಲಾಗಿತ್ತು. ಜೊತೆಗೆ 1,505 ಕೋಟಿ ರೂಪಾಯಿಗಳನ್ನು ವಾಹನ ತೆರಿಗೆಯಿಂದ ವಿನಾಯಿತಿ ನೀಡಿ ಬಂಡವಾಳವನ್ನಾಗಿ ಪರಿವರ್ತಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ವಿಶೇಷ ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆಯಾಗಿ 3,840 ಸಹಾಯಧನವನ್ನು ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳ ಉಪಯೋಗವನ್ನು ಉತ್ತೇಜಿಸುವ ಮೂಲಕ ವಾಯು ಮಾಲಿನ್ಯವನ್ನು ಕಡಿಮೆಗೊಳಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು ಮತ್ತು ರಾಜ್ಯರಸ್ತೆ ಸಾರಿಗೆ ನಿಗಮಗಳ ಡಿಪೊೀಗಳಲ್ಲಿ ಹಸಿರು ತೆರಿಗೆ ನಿಯ ಅನುದಾನದಡಿ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

#KSRTC, #BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,

Articles You Might Like

Share This Article