Saturday, June 22, 2024
Homeರಾಷ್ಟ್ರೀಯಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ 13ಮಂದಿ ಸಾವು

ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ 13ಮಂದಿ ಸಾವು

ರಾಜಗಢ,ಜೂ.3-ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ರೋಡಿಯಲ್ಲಿ ತಡರಾತ್ರಿಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ತಲೆ ಮತ್ತು ಎದೆಗೆ ಗಾಯಗಳಾಗಿರುವ ಕಾರಣ ಸುಧಾರಿತ ಚಿಕಿತ್ಸೆಗಾಗಿ ಭೋಪಾಲ್‌ಗೆ ರವಾನಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್‌ ದೀಕ್ಷಿತ್‌ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದರು. ಬಲಿಪಶುಗಳು ನೆರೆಯ ರಾಜಸ್ಥಾನದ ಮೋತಿಪುರ ಗ್ರಾಮದಿಂದ ಬಂದು ಇಲ್ಲಿನ ಕುಲಂಪುರಕ್ಕೆ ತೆರಳುತ್ತಿದ್ದ ಮದುವೆ ಪಾರ್ಟಿಯ ಸದಸ್ಯರು ಎಂದು ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.

RELATED ARTICLES

Latest News