ದಾಖಲೆಗಳಿಲ್ಲದ ಸರ್ಕಾರಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂ. ಮೌಲ್ಯದ ಚಿನ್ನ ವಶ

ಚಿಕ್ಕಮಗಳೂರು,ಮಾ.22- ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ಸರ್ಕಾರಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 13 ಲಕ್ಷ ಮೌಲ್ಯದ 220 ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಅಜ್ಜಂಪುರ, ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ನಗದನ್ನು ಜಪ್ತಿ ಮಾಡಿದ್ದಾರೆ. ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಿನ್ನೆ ಬೆಂಗಳೂರಿನಿಂದ-ಚಿಕ್ಕಮಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 220 ಗ್ರಾಂ ಚಿನ್ನದ ತಾಳಿ, ನೆಕ್ಲೇಸ್, ಬ್ರಾಸ್ಲೈಟ್ , ಬಳೆ, ಸರ, ಉಂಗುರಗಳನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ತಂಡ ಸೀಜ್ ಮಾಡಿದ್ದಾರೆ. … Continue reading ದಾಖಲೆಗಳಿಲ್ಲದ ಸರ್ಕಾರಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂ. ಮೌಲ್ಯದ ಚಿನ್ನ ವಶ