Thursday, September 19, 2024
Homeರಾಷ್ಟ್ರೀಯ | Nationalಬಿಹಾರ : ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬಿಹಾರ : ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಅರಾ, ಅ 19 (ಪಿಟಿಐ) ಹದಿಮೂರು ವರ್ಷದ ಬಾಲಕಿ ಮೇಲೆ ಬಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ ನಡೆದಿದೆ.ಬೇರೆ ಸಮುದಾಯಕ್ಕೆ ಸೇರಿದ ಬಾಲಕಿ ಮೇಲೆ ಇನ್ನೊಂದು ಸಮುದಾಯದ ಬಾಲಕ ಅತ್ಯಾಚಾರ ನಡೆಸಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಶನ್ಗಢ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು ಅತ್ಯಾಚಾರ ನಡೆಸಿ ಪರಾರಿಯಾಗಿರುವ ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.ಸ್ಥಳೀಯ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು.

ಈ ನಡುವೆ ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಾಲಕನ ತಂದೆಯನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News