Thursday, June 20, 2024
Homeರಾಜ್ಯಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು ಜೂ. 10 : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪ್ರಕರಣ ದ ವಿಚಾರಣೆ ನೆಡೆಸಿದ ನ್ಯಾಯಾಧೀಶರು ಜೂನ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಾಗ ಅವರು ವಿದೇಶಕ್ಕೆ ತೆರಳಿದರು ಅವರ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು ತನಿಖೆಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು ಎಸ್ ಐಟಿ. ನ್ಯಾಯಾಧೀಶರಿಗೆ ಮುಚ್ಚಿದ ಲಕೋಟಿಯಲ್ಲಿ ವರದಿ ಸಲ್ಲಿಸಿದೆ.

RELATED ARTICLES

Latest News