Friday, May 3, 2024
Homeರಾಜ್ಯಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ

ಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ

ಬೆಂಗಳೂರು, ಅ.8- ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ 12 ಶವಗಳನ್ನು ಗೋದಾಮಿನಿಂದ ಹೊರತೆಗೆಯಲಾಗಿದ್ದು, ತಡರಾತ್ರಿ ಇನ್ನೆರಡು ಶವಗಳು ಸಿಕ್ಕಿವೆ. ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದರಲ್ಲಿ ಇನ್ನೂ ಕೆಲವರ ಗುರುತು ಸಿಕ್ಕಿಲ್ಲ. ಅವರುಗಳ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ದುರಂತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಸೆಂಟ್‍ಜಾನ್ ಮತ್ತು ಆಕ್ಸ್‍ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಮಸ್ವಾಮಿ ರೆಡ್ಡಿ ಮತ್ತು ನವೀನ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ವಿವರಿಸಿದರು.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ನಮ್ಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ಮಧ್ಯಾಹ್ನ 3.30ರ ಸಂದರ್ಭದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿ ಸತತ ಪ್ರಯತ್ನ ನಡೆಸಿ ತಡರಾತ್ರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೂ 14 ಜೀವಗಳು ಬಲಿಯಾಗಿದ್ದು, ಕೆಲವು ಶವಗಳು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿವೆ.

ಭೇಟಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ತಮಿಳುನಾಡಿನ ಸಚಿವರು, ಶಾಸಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ ವಹಿಸದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಲವರು ತಮಿಳುನಾಡಿನ ಹೊಸೂರು, ಶಿವಕಾಶಿ ಸೇರಿದಂತೆ ಹಲವೆಡೆ ಪಟಾಕಿ ಖರೀದಿಸಲು ತೆರಳುತ್ತಾರೆ. ಅದನ್ನು ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಸಂಗ್ರಹಿಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ಕೆಲವರು ಗೋದಾಮುಗಳಲ್ಲಿ ಇದನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಅಕ್ಕಪಕ್ಕದಲ್ಲಿರುವುದರಿಂದ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ ಸಂಭವಿಸಿದ ಈ ಘೋರ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಮೃತರಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

RELATED ARTICLES

Latest News