ಬೆಂಗಳೂರು,ಆ.8- ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ 160 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಈವರೆಗೂ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 21,727 ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿದವರಿಗೆ ಕಾಳಜಿ ಕಿಟ್‍ಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹಪೀಡಿತ ಭಾಗದಲ್ಲಿ 8100 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 10ರಿಂದ 15 ದಿನಗಳಿಗೆ ಆಗುವಷ್ಟು ಆಹಾರದ ಕಿಟ್‍ಗಳನ್ನು ನೀಡಲಾಗಿದೆ ಎಂದರು.
ರಾಜ್ಯದ 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಲಾಗಿದೆ. ಮನೆ ಹಾನಿ ಪರಿಹಾರಕ್ಕಾಗಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನೆರೆ ಸಂತ್ರಸ್ತರ ಖಾತೆಗಳಿಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜುಲೈನಲ್ಲಿ 25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು ಎಂದರು.
10 ಕೆಜಿ ಹಕ್ಕಿ, ತಲಾ ಒಂದು ಕೆಜಿ ತೊಗರಿಬೇಳೆ, ಅಡುಗೆ ಎಣ್ಣೆ , ಉಪ್ಪು ಒಳಗೊಂಡಂತೆ 11 ಪದಾರ್ಥಗಳ ಕಿಟ್‍ನ್ನು ಪ್ರವಾಹ ಸಂಕಷ್ಟಕ್ಕೆ ಸಿಲುಕಿದವರಿಗೆ ನೀಡಲಾಗುವುದು. ಸಂಪೂರ್ಣ ಮನೆ ಹಾನಿಗೆ 5 ಲಕ್ಷ , ಅರ್ಧ ಮನೆ ಹಾಳಾದರೆ 2.4 ಲಕ್ಷ , ಭಾಗಶಃ ಮನೆ ಹಾನಿಗೆ 50 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ 25 ಸಾವಿರ ರೂ. ನೀಡಲಾಗುತ್ತಿದೆ ಎಂದು ವಿವರಿಸಿದರು.
ಜೂ.1ರಿಂದ ನಿನ್ನೆಯವರೆಗೆ ಸಿಡಿಲು ಬಡಿದು 15, ಮನೆ ಕುಸಿತದಿಂದ 19, ಮರ ಬಿದ್ದು 5, ಪ್ರವಾಹ ಸೆಳೆತಕ್ಕೆ ಸಿಲುಕಿ 24, ಭೂ ಕುಸಿತದಿಂದ 9 ಹಾಗೂ ವಿದ್ಯುತ್ ಅಪಘಾತದಿಂದ ಒಬ್ಬರು ಮೃತಪಟ್ಟಿದ್ದಾರೆ. 75 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. 7,386 ಮಂದಿ ಅಶ್ರಯ ಪಡೆದಿದ್ದಾರೆ ಎಂದು ಹೇಳಿದರು.
666 ಮನೆ ಸಂಪೂರ್ಣ ಹಾನಿಗೀಡಾಗಿದ್ದು, 2949 ಮನೆ ತೀವ್ರ ಹಾನಿಯಾಗಿವೆ. 17,750 ಮನೆಗಳು ಭಾಗಶಃ ಹಾನಿಗೀಡಾಗಿವೆ. 509 ಜಾನುವಾರುಗಳು ನಷ್ಟವಾಗಿವೆ. 1,29,087 ಎಕರೆ ಕೃಷಿ ಬೆಳೆ, 7,942 ಎಕರೆ ತೋಟಗಾರಿಕೆ ಬೆಳೆ ಹಾನಿಗೀಡಾಗಿವೆ. 11,748 ಕಿ.ಮೀ ರಸ್ತೆ, 1152 ಸೇತುವೆ, 4,561 ಶಾಲೆ, 122 ಪ್ರಾಥಮಿಕ ಆರೋಗ್ಯ ಕೇಂದ್ರ, 2249 ಅಂಗನವಾಡಿ ಕೇಂದ್ರಗಳು, 17,066 ವಿದ್ಯುತ್ ಕಂಬಗಳು, 1472 ಟ್ರಾನ್ಸ್‍ಫಾರಂಗಳು, 95 ಸಣ್ಣ ನೀರಾವರಿ ಕೆರೆಗಳು ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.
4 ಎನ್‍ಡಿಆರ್‍ಎಫ್ ತಂಡಗಳನ್ನು ಬೆಳಗಾವಿ, ರಾಯಚೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಿಯೋಜಿಸಿದ್ದು, ಒಂದು ತಂಡವನ್ನು ಬೆಂಗಳೂರಿಗೆ ನಿಯೋಜಿಸಲಾಗಿದೆ. ರಾಜ್ಯ ಸರ್ಕಾರವು ಉತ್ತರಕನ್ನಡ, ಉಡುಪಿ ಜಿಲ್ಲೆಗಲ್ಲಿ 4 ಎಸ್‍ಡಿಆರ್‍ಎಫ್ ತಂಡಗಳನ್ನು ನಿಯೋಜಿಸಿದೆ.
ಈಗಾಗಲೇ ಪ್ರವಾಹ ಪೀಡಿತ ಕೊಡುಗು, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಮಂಗಳೂರು, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ್ದು, ನಾಳೆ ಚಿತ್ರದುರ್ಗ, ದಾವಣಗೆರೆಗೆ ಭೇಟಿ ನೀಡುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಪಿ.ರಾಜೀವ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ,