ಬೆಂಗಳೂರು,ಜ.22- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ತಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೃತರ ಆತಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಿದ್ದಾರೆ.