ಆರೋಪಿ ಸೆರೆ : 10 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ವಶ

Social Share

ಬೆಂಗಳೂರು, ಜ.19- ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ರೂ. ಬೆಲೆಬಾಳುವ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಬ್ರಮಣ್ಯಪುರ ಮುಖ್ಯರಸ್ತೆಯ ವಸಂತ ಪುರದ ನಿವಾಸಿ ಯಾಸೀನ್(31) ಬಂಧಿತ ಆರೋಪಿ. ಬನಶಂಕರಿ ಎರಡನೇ ಹಂತದ 23ನೇ ಕ್ರಾಸ್‍ನಲ್ಲಿ ಲಕ್ಷ್ಮಣ ಬಗಲೂರ ಎಂಬುವರು ನಿಲ್ಲಿಸಿದ್ದ 15 ಸಾವಿರ ಬೆಲೆಯ ಸ್ಕೂಟರ್ ಕಳ್ಳತನವಾಗಿತ್ತು.

ಈ ಬಗ್ಗೆ ಬನಶಂಕರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಈ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ಲಕ್ಷ ಬೆಲೆಯ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

7 ಬಿಡಿಎ ನಿವೇಶನಗಳನ್ನು ನುಂಗಿದರೇ ನಿರ್ಮಾಪಕ ಉಮಾಪತಿ..?

ಆರೋಪಿ ಯಾಸೀನ್ ಈ ಹಿಂದೆ ತಲಘಟ್ಟ ಪುರ ಪೊಲೀಸ್ ಠಾಣೆಯ ದರೋಡೆಗೆ ಸಂಚು ಪ್ರಕರಣ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ದರೋಡೆಗೆ ಸಂಚು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

ಆರೋಪಿಯನ್ನು ಬಂಸುವಲ್ಲಿ ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಕೃಷ್ಣಕಾಂತ್ ಮತ್ತು ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ಇನ್ಸ್‍ಪೆಕ್ಟರ್ ಗಿರೀಶ್ ನಾಯಕ್ ನೇತೃತ್ವದ ಸಿಬ್ಬಂದಿ ತಂಡ ಯಶಸ್ವಿಯಾಗಿದೆ.

14 two-wheelers, worth, Rs 10 lakh, seized,

Articles You Might Like

Share This Article