ಮುಂಬೈ ದಾಳಿ ನಡೆದು ಇಂದಿಗೆ 14 ವರ್ಷ

Social Share

ಮುಂಬೈ,ನ.26- ಮುಂಬೈ ಭಯೋತ್ಪಾದಕ ದಾಳಿ ನಡೆದು ಇಂದಿಗೆ 14 ವರ್ಷಗಳಾಗಿದ್ದು, ಇಡೀ ದೇಶವೇ ಬೆಚ್ಚಿ ಬಿದ್ದಂತಹ ಘಟನೆಯ ಆ ಕಹಿ ನೆನಪು ಮರುಕಳಿಸಿದೆ.

2008ರ ನವೆಂಬರ್ 26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದಿಂದ 10 ಮಂದಿ ಭಯೋತ್ಪಾದಕರು ಮುಂಬೈಗೆ ಆಗಮಿಸಿದ್ದರು. ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ಓಬೆರಾಯ್ ಟ್ರೈಡೆಂಟ್ , ತಾಜ್‍ಮಹಲ್ ಪ್ಯಾಲೇಸ್ ಮತ್ತು ಟವರ್, ಲಿಯೋಪೋರ್ಡ್ ಕೆಫೆ, ಕಾಮಾಸ್ಪತ್ರೆ, ನಾರಿಮನ್ ಹೌಸ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

ಘಟನೆಯಲ್ಲಿ 26 ಮಂದಿ ವಿದೇಶಿಯರು, 18 ಮಂದಿ ಭದ್ರತಾ ಸಿಬ್ಬಂದಿಗಳು ಸೇರಿ 166ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು. ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ, ಸೇನೆಯ ಮೇಜರ್ ಸಂದೀಪ್ ಉನ್ನೀಕೃಷ್ಣನ್, ಮುಂಬೈನ ಹೆಚ್ಚುವರಿ ಪೊಲೀಸ್ ಆಯುಕ್ತ ಅಶೋಕ್ ಕಾಮ್ಟೆ , ವಿಜಯ್ ಸಾಲಸ್ಕರ್ ಸೇರಿದಂತೆ ಹಲವಾರು ಮಂದಿ ವೀರ ಮರಣ ಹೊಂದಿದ್ದರು.

ಪೊಲೀಸ್ ಸಿಬ್ಬಂದಿಗಳ ಸಾಹಸಮಯ ಕಾರ್ಯಚರಣೆಯಿಂದ ಉಗ್ರ ಅಜ್ಮಲ್ ಕಸಬ್ ಜೀವಂತವಾಗಿ ಸೆರೆ ಸಿಕ್ಕಿದ್ದ. ಇದರಿಂದಾಗಿ ಘಟನೆಯಲ್ಲಿ ಪಾಕಿಸ್ತಾನದ ಸಂಚು ಬಯಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಕಸಬ್‍ನನ್ನು 2012ರ ನವೆಂಬರ್ 21ರಂದು ಗಲ್ಲಿಗೇರಿಸಲಾಯಿತು.

ಜೈಲಲ್ಲಿ AAP ಸಚಿವನ ದರ್ಬಾರ್ ಕುರಿತ ಮತ್ತೊಂದು ವಿಡಿಯೋ ರಿಲೀಸ್

ಈ ಕರಾಳ ದಿನದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದು, ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರನ್ನು ದೇಶ ಸ್ಮರಿಸಿಕೊಳ್ಳುತ್ತದೆ. ಅವರ ಕುಟುಂಬದ ನೋವಿನಲ್ಲಿ ನಾವು ಭಾಗಿಗಳಾಗಿದ್ದೇವೆ. ಜನರ ಪ್ರಾಣ ರಕ್ಷಣೆಗಾಗಿ ತ್ಯಾಗ ಮಾಡಿ ವೀರ ಮರಣವನ್ನಪ್ಪಿದ ಭದ್ರತಾ ಸಿಬ್ಬಂದಿಗಳಿಗೆ ದೇಶ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದಿದ್ದಾರೆ.

ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಭಯೋತ್ಪಾದನೆ ಮಾನವೀಯತೆಗೆ ಬೆದರಿಕೆಯಾಗಿದೆ. ನ.26ರ ಮುಂಬೈ ದಾಳಿಯನ್ನು ಹತ್ಯಾಕಾಂಡವನ್ನು ದೇಶ ಮರೆತಿಲ್ಲ. ಘಟನೆಯಲ್ಲಿ ತೊಂದರೆಗೊಳಗಾದವರ ಕುಟುಂಬಕ್ಕೆ ನ್ಯಾಯ ದೊರಕಲಿದೆ. ಭಯೋತ್ಪಾದನೆ ಚಟುವಟಿಕೆಗಳಿಂದ ತೊಂದರೆ ಒಳಗಾದವರ ಜೊತೆ ನಿಲ್ಲುವ ಪ್ರತಿಜ್ಞೆಯನ್ನು ಪ್ರತಿಯೊಬ್ಬರು ಮಾಡಬೇಕಿದೆ. ವಿಶ್ವಾದ್ಯಂತ ಭಯೋತ್ಪಾದನೆಯನ್ನು ಹತ್ತಿಕ್ಕುವ ಬದ್ದತೆಯನ್ನು ಎಲ್ಲರೂ ಪದರ್ಶಿಸಬೇಕಿದೆ ಎಂದಿದ್ದಾರೆ.

ಮಹಾರಾಷ್ಟ್ರದ 42 ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಲು ನಿರ್ಣಯ

ಮಹಾರಾಷ್ಟ್ರದ ರಾಜ್ಯಪಾಲ ಭಗವಂತ್ ಸಿಂಗ್ ಕೋಶ್ಯಾರಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದಾಳಿಯಲ್ಲಿ ಹತ್ಯೆಯಾದವರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಭೆಯಲ್ಲಿ ಭಾಗವಹಿಸಿದ್ದರು.

14 years, since, Mumbai, terror, attack,

Articles You Might Like

Share This Article