ಮೈಸೂರು,ಫೆ.8- ಕರ್ನಾಟಕದ ಮೊದಲ ಹೆಣ್ಣು ಮಕ್ಕಳ ಶಾಲೆಯಾಗಿದ್ದ ನಗರದ ಎನ್‍ಟಿಎಂಎಸ್ ಶಾಲೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಈ ಶಾಲೆಯನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ತಡರಾತ್ರಿ ಶಾಲಾ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.
ಈ ಶಾಲೆ ಇದ್ದ ಸ್ಥಳವು ವಿವೇಕಾನಂದ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರಿಸಲಾಗದೆ. ಏತನ್ಮಧ್ಯೇ ಶಾಲೆಯ ಸ್ಥಳ ನೀಡಲು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹೈಕೋರ್ಟ್ ಆದೇಶದಂತೆ ತಡೆರಾತ್ರಿ ಪೊಲೀಸ್ ಬಿಗಿ ಭದ್ರತೆಯಲ್ಲಿ 140 ವರ್ಷಗಳ ಹಳೆಯ ಶಾಲಾ ಕಟ್ಟಡವನ್ನು ತೆರವುಗೊಳಿಸಲಾಗಿದೆ.
ವಿವೇಕಾನಂದರ 150ನೇ ಜಯಂತಿ ಸವಿನೆನಪಿಗಾಗಿ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಅಡ್ಡಿಪಡಿಸಲು ಬಂದ ಎನ್‍ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.
