ಟ್ರಕ್‍ಗೆ ಬಸ್ ಡಿಕ್ಕಿ, 15 ಕಾರ್ಮಿಕರ ದುರ್ಮರಣ,ಮಧ್ಯಪ್ರದೇಶದಲ್ಲಿ ಘೋರ ದುರಂತ

Social Share

ಭೂಪಾಲ್,ಅ.22- ಮಧ್ಯಪ್ರದೇಶದ ರೇವಾ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದೀಪಾವಳಿ ಹಬ್ಬ ಆಚರಿಸಲು ತೆರಳುತ್ತಿದ್ದ 15 ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 40 ಮಂದಿ ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.

ಸುಮಾರು 100 ಮಂದಿ ಪ್ರಯಾಣಿಕರಿದ್ದ ಬಸ್ ಉತ್ತರ ಪ್ರದೇಶದ ಗೋರಖ್‍ಪುರಕ್ಕೆ ತೆರಳುತ್ತಿದ್ದಾಗ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಸಿದೆ.
ಗಾಯಾಳುಗಳನ್ನು ಸುಹಗಿಯ ಆಸ್ಪತ್ರೆಗೆ ಸಾಗಿಸಲಾಗಿದ್ದರೆ, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತವಾಗಿ ನಿಂತಿದ್ದ ಟ್ರಕ್‍ಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಉತ್ತರಪ್ರದೇಶದ ಕಾರ್ಮಿಕರಾಗಿದ್ದು, ಅವರೆಲ್ಲಾ ಮಧ್ಯಪ್ರದೇಶದ ಕಟ್ನಿಯಲ್ಲಿ ಬಸ್ ಹತ್ತಿದ್ದರು ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ತಿಳಿಸಿದ್ದಾರೆ.

ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಉತ್ತರಪ್ರದೇಶದ ಕಾರ್ಮಿಕರು ಮಧ್ಯಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ದೀಪಾವಳಿ ಹಬ್ಬ ಆಚರಿಸಲು ತಮ್ಮ ಊರುಗಳಿಗೆ ಹಿಂತಿರುಗುತ್ತಿದ್ದರೂ ಎಂದು ತಿಳಿಸಿರುವ ಬಾಸಿನ್ ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ ತಲಾ 50,000 ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಅವರ ಕುಟುಂಬ ಸದಸ್ಯರಿಗೆ ಮೃತದೇಹಗಳನ್ನು ರವಾನಿಸಲು ರೇವಾ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Articles You Might Like

Share This Article