ನವದಹೆಲಿ, ಡಿ.16- ಆಯುಷ್ಮಾನ್ ಭಾರತ್ ಯೋಜನೆಯಡಿ ಕಳೆದ ಒಂದು ವರ್ಷದಲ್ಲಿ ಒಂದೂವರೆ ಸಾವಿರ ಖಾಸಗಿ ಆಸ್ಪತ್ರೆಗಳು ಸೇರ್ಪಡೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯ ತಿಳಿಸಿದ್ದಾರೆ.
ಲೋಕ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯೋಜನೆಯ ಬಗ್ಗೆ ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ದೇಶದ ಜನರ ಜೇಬಿನಿಂದ ಚಿಕಿತ್ಸೆಗೆ ಹಣ ಖರ್ಚು ಮಾಡುವ ಪ್ರಮಾಣ ತಗ್ಗಿದೆ ಎಂದು ಹೇಳಿದರು.
2018ರಲ್ಲಿ ಯೋಜನೆಯನ್ನು ಜಾರಿಗೊಳಿಸಲಾಯಿತು. ಸುಮಾರು 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ಭದ್ರತೆಯನ್ನು ಒದಗಿಸಲಾಗಿದೆ. ಇನ್ನೂ 4.5 ಕೋಟಿ ಕುಟುಂಬಗಳು ಜನ ಯೋಜನೆಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪರಮಾಣು ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿ
ಪ್ರತಿದಿನ 7ರಿಂದ 8 ಲಕ್ಷ ಫಲಾನುಭವಿ ಕಾರ್ಡ್ಗಳನ್ನು ಮುದ್ರಿಸಲಾಗುತ್ತಿದೆ. ಮುಂದಿನ ನಾಲ್ಕೈದು ತಿಂಗಳ ಒಳಗಾಗಿ ದೇಶದಲ್ಲಿ 50 ಕೋಟಿ ಜನರಿಗೆ ಕಾರ್ಡ್ ವಿತರಿಸಲಾಗುವುದು. ಆಯುಷ್ಮಾನ್ ಭಾರತ್ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 5 ಲಕ್ಷ ರೂಪಾಯಿವರೆಗೂ ವೈದ್ಯಕೀಯ ವೆಚ್ಚ ಭರಿಸಲಾಗುವುದು.
ಯೋಜನೆಯ ವ್ಯಾಪ್ತಿಗೊಳಪಡುವ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಒಟ್ಟಾರೆ ಈವರೆಗೂ 22 ಸಾವಿರ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಯೋಜನೆ ವ್ಯಾಪ್ತಿಗೊಳಪಟ್ಟಿವೆ ಎಂದು ಅವರು ಸ್ಪಷ್ಟಪಡಿಸಿದರು.
#AyushmanBharatYojana #Hospitals