ರಾಯುರ( ಛತ್ತೀಸ್‌ಗಡ), ಮಾ.29 – ಇಲ್ಲಿನ ಗಡಿಯಲ್ಲಿರುವ ಉಪಂಪಲ್ಲಿ ಕೇರ್ಲಾಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 16 ಮಾವೋವಾದಿಗಳು ಸಾವನ್ನಪ್ಪಿ, ಇಬ್ಬರು ಜವಾನರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಜನವರಿ 21 ರಂದು ಗರಿಯಾಬಂದ್‌ನಲ್ಲಿ ನಡೆದ ಎನ್‌ಕೌಂಟರಲ್ಲಿ 16 ನಕ್ಸಲರನ್ನು ಹತ್ಯೆ ಮಾಡಿದ ನಂತರ ಭದ್ರತಾ ಸಿಬ್ಬಂದಿ ನಡೆಸಿದ ಅತೀ ದೊಡ್ಡ ಕಾರ್ಯಾಚಾರಣೆ ಇದಾಗಿದೆ. ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಕೆರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಬೀಡು ಬಿಟ್ಟಿರುವ ಬಗ್ಗೆ ಗುಪ್ತಚರವನ್ನು ಆಧರಿಸಿ ಮೀಸಲು ಗಾರ್ಡ್ (ಡಿಆರಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರಿಎಫ್) ಸಿಬ್ಬಂದಿಯೂ ಕಾರ್ಯಾಚರಣೆಯನ್ನು ನಡೆಸಿತ್ತು. ಇದರಲ್ಲಿ 16 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಜವಾನರು ಗಾಯಗೊಂಡಿದ್ದಾರೆ.
ಹದಿನಾರು ನಕ್ಸಲೀಯರ ಶವಗಳನ್ನು ಇಲ್ಲಿಯವರೆಗೆ ಎನ್ ಕೌಂಟರ್ ನಡೆದ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಭದ್ರತಾ ಪಡೆಗಳು ಪ್ರಸ್ತುತ ಎನ್‌ಕೌಂಟರ್ ಸ್ಥಳ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ತೀವ್ರ ಶೋಧ ನಡೆಸುತ್ತಿವೆ. ನಡೆಯುತ್ತಿರುವ ಕಾರ್ಯಾಚರಣೆ ಪೂರ್ಣಗೊಂಡ ನಂತರ ವಿವರವಾದ ಹೇಳಿಕೆಯನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಸುಕ್ತಾ ಅತ್ಯಂತ ಹೆಚ್ಚು ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಒಂದಾಗಿದೆ. ಈ ಹಿಂದೆ ಹಲವಾರು ನಕ್ಸಲ್ ದಾಳಿಗಳನ್ನು ಈ ಪ್ರದೇಶದಲ್ಲಿ ಕಂಡಿದ್ದೇವೆ. ಇನ್ನು ಶುಕ್ರವಾರ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ.
ಇನ್ನು ಇದೇ ವೇಳೆ ಛತ್ತೀಸ್ ಗಢದ ಬೆಡ್ಡಕೋಟಿಯ ಬಳಿ ಇಟ್ಟಿದ ಮತ್ತೊಂದು ಐಇಡಿ ಸ್ಪೋಟಗೊಂಡು ಮತ್ತೊಂಬ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕನಿಗೆ ನಾರಾಯಣಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಬಸ್ತಾರ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ, ಗಾಯಗೊಂಡ ಸೈನಿಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಫೆಬ್ರವರಿಯಲ್ಲಿ, ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ಕಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವತ್ತೊಂದು ಮಾವೋವಾದಿಗಳು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಹತರಾಗಿದ್ದರು. ಇದು ಈ ವರ್ಷ ಎಡಪಂಥೀಯ ಉಗ್ರಗಾಮಿಗಳ ಮೇಲೆ ನಡೆಸಿದ ಅತಿ ದೊಡ್ಡ ಕಾರ್ಯಾಚಾರಣೆ ಇದಾಗಿದೆ. ಪ್ರಸಕ್ತ ವರ್ಷ ಮಾವೋವಾದಿ ನಕ್ಸಲೀಯರ ಸಾವಿನ ಸಂಖ್ಯೆ 81 ಕ್ಕೆ ತಲುಪಿದೆ.
ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ವಿರೋಧಿಸಿ ಮುಷ್ಕರ ನಡೆಸಲಾಗಿತ್ತು. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎನ್ ಕೌಂಟರ್‌ನಲ್ಲಿ ಅಂತ್ಯಗೊಂಡಿತು ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್), ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.
ಸಿಪಿಐ (ಮಾವೋವಾದಿ) ರಾಷ್ಟ್ರೀಯ ಉದ್ಯಾನವನ ಪ್ರದೇಶ ಸಮಿತಿಯಿಂದ ದಂಗೆಕೋರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.