ಬೆಂಗಳೂರು, ಫೆ.17- ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ 240 ಕೋಟಿ ರೂ.ಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ಸರ್ಕಾರ ದಾಖಲೆ ಮಾಡಿದೆ. ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದ್ದಾರೆ.
2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ನೂತನ ಪೊಲೀಸ್ ಕಚೇರಿಗಳು, ಪೊಲೀಸ್ ಠಾಣೆಗಳ ನಿರ್ಮಾಣ, ಉನ್ನತೀಕರಣ ಮತ್ತು ಆಧುನೀಕರಣಕ್ಕೆ 348 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ 410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮತ್ತು 51 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ರಾಜ್ಯದಲ್ಲಿ ಈಗಾಗಲೇ 8 ವಿ ವಿಜ್ಞಾನ ಪ್ರಯೋಗಾಲಯಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ವರದಿ ಒಂದು ತಿಂಗಳೊಳಗೆ ದೊರೆಯಲಿದೆ. ಪ್ರಸಕ್ತ ವರ್ಷ 10 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಿ-ವಿಜ್ಞಾನ ಪ್ರಯೋಗಾಲಯವನ್ನು ಪ್ರಾರಂಭಿಸಲಾಗುವುದು.
ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಧಾರವಾಡದಲ್ಲಿ ವಿ- ವಿಜ್ಞಾನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಗುತ್ತದೆ ಎಂದರು.ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ಇನ್ನಷ್ಟು ಬಲಪಡಿಸಲು 1000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಹೇಳಿದ್ದಾರೆ.
#BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,