ಶಹಜಹಾನ್ಪುರ, ಮಾ 29 (ಪಿಟಿಐ) : ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಆಕೆಯ ಗ್ರಾಮದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೀರನ್ಪುರ ಕತ್ರಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಮನೋಜ್ ಅವಸ್ತಿ ತಿಳಿಸಿದ್ದಾರೆ.
ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಆಕೆಯನ್ನು ಜಮೀನಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಆಕೆ ವಿರೋಧಿಸಿದಾಗ ಆರೋಪಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ ಎಂದು ಅವಸ್ತಿ ಹೇಳಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ