Thursday, December 5, 2024
Homeರಾಷ್ಟ್ರೀಯ | Nationalಚಲಿಸುವ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುವ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

16-year-old raped in moving Ambulance in Madhya Pradesh

ಮೌಗಂಜ್‌,ನ.29- ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಮೌಗಂಜ್‌ ಜಿಲ್ಲೆಯಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆ ನಡೆದ ಈ ಪ್ರಕರಣದಲ್ಲಿ 108 ಆಂಬ್ಯುಲೆನ್ಸ್ ಚಾಲಕ ಸೇರಿದಂತೆ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ಸಹೋದರಿ ಮತ್ತು ಸೋದರ ಮಾವನೊಂದಿಗೆ ಆಂಬ್ಯುಲೆನ್ಸ್ ನಲ್ಲಿ ಪ್ರಯಾಣಿಸುತ್ತಿದ್ದಳು. ಬಾಲಕಿಗೆ ಪರಿಚಿತನಾಗಿದ್ದ ಚಾಲಕ ಮಾರ್ಗ ಮಧ್ಯೆ ನೀರು ತರಲು ಬಾಲಕಿ ಸಹೋದರಿ ಹಾಗೂ ಸೋದರಮಾವ ಇಳಿದುಹೋದಾಗ ಆಂಬ್ಯುಲೆನ್ಸ್ ಚಲಾಯಿಸಿಕೊಂಡು ಮುಂದೆ ಹೋಗಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ.

ಚಾಲಕನ ಸಹವರ್ತಿ ರಾಜೇಶ್‌ ಕೇವತ್‌ ಕೂಡ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಮರುದಿನ ಬೆಳಿಗ್ಗೆ ಆಕೆಯನ್ನು ರಸ್ತೆ ಬದಿ ತಳ್ಳಿ ಪರಾರಿಯಾಗಿದ್ದರು. ಈ ಕೃತ್ಯಕ್ಕೆ ಬಾಲಕಿಯ ಸಹೋದರಿ ಹಾಗೂ ಸೋದರಮಾವ ಕೂಡ ಸಹಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಮತ್ತು ಆಕೆಯ ತಾಯಿ ಪೊಲೀಸರನ್ನು ಸಂಪರ್ಕಿಸಿದರು. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಾದ ಆಂಬ್ಯುಲೆನ್ಸ್ ಚಾಲಕ ವೀರೇಂದ್ರ ಚತುರ್ವೇದಿ ಮತ್ತು ಆತನ ಸಹಚರ ಕೇವತ್‌ ಅವರನ್ನು ಬಂಧಿಸಲಾಗಿ.

ಅಪರಾಧಕ್ಕೆ ಕುಮಕ್ಕು ನೀಡಿದ ಆರೋಪ ಹೊತ್ತಿರುವ ಬಾಲಕಿಯ ಸಹೋದರಿ ಮತ್ತು ಸೋದರ ಮಾವನ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಐಪಿಎಸ್‌‍ ಅಧಿಕಾರಿ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

Latest News