ಪಟ್ನಾ ಜ.2- ಕೊರೊನಾ ಆರಂಭಗೊಡಾಗಿನಿಂದಲೂ ಹಗಲಿರುಳು ರೋಗಿಗಳ ಸೇವೆಯಲ್ಲಿ ತೊಡಗಿರುವ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು ಈಗ ಒಂದೇ ದಿನ 17 ಮಂದಿ ವೈದ್ಯರಲ್ಲಿ ಕೊರೊನಾ ಸೋಂಕು ತಗುಲುವ ಮೂಲಕ ಆತಂಕ ಸೃಷ್ಟಿಸಿದೆ.
ಪಟ್ನಾದ ನಂದಾಲಾ ಮೆಡಿಕಲ್ ಕಾಲೇಜು ಮತ್ತು ಹಾಸ್ಪಿಟಲ್( ಎನ್‍ಎಂಸಿಎಚ್) ನಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ 17 ಮಂದಿ ವೈದ್ಯರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಕೊರೊನಾ ಸೋಂಕು ತಗುಲಿರುವ ವೈದ್ಯರೆಲ್ಲರೂ ಡಿಸೆಂಬರ್ 28 ರಂದು ನಡೆದ ಭಾರತೀಯ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.
ಕಳೆದ ಒಂದು ವಾರದಿಂದಲೂ ಬಿಹಾರ್‍ನಲ್ಲಿ ಕೊರೊನಾ ಸೋಟ ಗೊಂಡಿದ್ದು ಕಳೆದ 24 ಗಂಟೆಗಳಲ್ಲಿ 281 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಪ್ರಸ್ತುತ ರಾಜ್ಯದಲ್ಲಿ 749 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ ಶೇ. 98.23 ಮಂದಿ ಗುಣಮುಖರಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
