ನಿವೃತ್ತರು ಸೇರಿ 15 ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಬಂಪರ್

Social Share

ಬೆಂಗಳೂರು,ಮಾ.1- ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಯಂತೆ ಶೇ.17ರಷ್ಟು ವೇತನವನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೂ ಮುನ್ನವೇ ಬಂಪರ್ ಕೊಡುಗೆ ನೀಡಿದೆ.ಏ.1ರಿಂದಲೇ ಜಾರಿಯಾಗುವಂತೆ ಶೇ.17ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದ್ದು, ಹಾಲಿ ನೌಕರರು ಹಾಗೂ ನಿವೃತ್ತರು ಸೇರಿದಂತೆ ಒಟ್ಟು 15 ಲಕ್ಷ ನೌಕರರಿಗೆ ಇದು ಅನ್ವಯವಾಗಲಿದೆ.

1ನೇ ಏಪ್ರಿಲ್, 2023ರಿಂದ ಅನ್ವಯವಾಗುವಂತೆ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾನಿಲಯ ಬೋಧಕೇತರ ಸಿಬ್ಬಂದಿಗೆ ಮೂಲ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.

ಹಣಕಾಸು ಇಲಾಖೆಯ ಅೀನ ಕಾರ್ಯದರ್ಶಿ ಜಯಶ್ರೀ.ಎಂ ಅವರು ಧಿಅಕೃತ ಆದೇಶ ಹೊರಡಿಸಿದ್ದಾರೆ. ಮೂಲವೇತನ ಎಂದರೆ ಸ್ಥಗಿತ ವೇತನ ಬಡ್ತಿ, ವೈಯಕ್ತಿಕ ವೇತನ ಜೊತೆಗೆ ಹೆಚ್ಚುವರಿ ವೇತನ ಬಡ್ತಿ ಸೇರಿರುತ್ತದೆ.

2018ರ ಪರಿಷ್ಕøತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ. ಸ್ಥಳೀಯ ಸಂಸ್ಥೆಗಳ(ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು) ನೌಕರರಿಗೆ ಸೌಲಭ್ಯವನ್ನು ಮಂಜೂರು ಮಾಡುವುದರಿಂದ ಉಂಟಾಗುವ ವೆಚ್ಚವನ್ನು ಸ್ಥಳೀಯ ಸಂಸ್ಥೆಗಳೇ ಭರಿಸಬೇಕೆಂದು ಸೂಚಿಸಲಾಗಿದೆ.

ಯೂಜಿಸಿ, ಎಐಸಿಟಿಇ, ಎನ್ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ಪಿಂಚಣಿದಾರರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಮಿತಿ ರಚನೆ:
ಹೊಸ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರೆಸುವ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.

ಈ ಸಮಿತಿಯು ಯಾವ ಯಾವ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿದೆ ಎಂಬುದನ್ನು ಅಧ್ಯಯನ ನಡೆಸಲು ಹೆಚ್ಚುವರಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಎರಡು ತಿಂಗಳೊಳಗೆ ವರದಿ ನೀಡಬೇಕೆಂದು ಸೂಚನೆ ನೀಡಲಾಗಿದೆ.

ಇದಕ್ಕೂ ಮುನ್ನ ಬೆಳಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸುವುದಾಗಿ ಘೋಷಣೆ ಮಾಡಿದರು. ಸಿಎಂ ಪ್ರಕಟಿಸಿದ ಬೆನ್ನಲ್ಲೇ ಸರ್ಕಾರದಿಂದ ಅಕೃತ ಆದೇಶ ಹೊರಬಿದ್ದಿತು.

Articles You Might Like

Share This Article