Thursday, June 12, 2025
Homeರಾಷ್ಟ್ರೀಯ | Nationalಹೈದರಾಬಾದ್‌ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೃತರ ಸಂಖ್ಯೆ 17ಕ್ಕೇರಿಕೆ

ಹೈದರಾಬಾದ್‌ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೃತರ ಸಂಖ್ಯೆ 17ಕ್ಕೇರಿಕೆ

17 people killed after building catches fire in Hyderabad, CM orders urgent action

ಹೈದರಾಬಾದ್ : ತೆಲಾಂಗಣದ ರಾಜಧಾನಿ ಹೈದರಾಬಾದ್ ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಸಮೀಪದಲ್ಲಿರುವ ಓಲ್ಡ್ ಸಿಟಿಯ ಗುಲ್ಜಾರ್ ಹೌಜ್‍ನಲ್ಲಿರುವ ಶ್ರೀಕೃಷ್ಣ ಪಲ್ರ್ಸ್ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ , ಮಕ್ಕಳು ಸೇರಿದಂತೆ 17 ಜನರು ಸಜೀವ ದಹನಗೊಂಡಿದ್ದು, 30 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಹೃಯದ ವಿದ್ರಾವಕ ಘಟನೆ ಭಾನುವಾರ ಮುಂಜಾನೆ ಸಂಭವಿಸಿದೆ.

ಅಭಿಷೇಖ್ ಮೋದಿ (30), ರಾಜೇಂದರ್ ಕುಮಾರ್ (67), ಮುನ್ನಿಭಾಯಿ (72), ಸುಮಿತ್ರಾ (65), ಇರಾಜ್ (2 ವರ್ಷ), ಅರುಷಿ ಜೈನ್ (17), ಹರ್ಷಾಲಿ ಗುಪ್ತಾ (7 ವರ್ಷ), ಮತ್ತು ಶೀತಾಜ್ ಜೈನ್ (37) ಎಂದು ಗುರುತಿಸಲಾಗಿದೆ.ರಕ್ಷಣಾ ತಂಡಗಳು ಇದುವರೆಗೆ 10 ರಿಂದ 15 ಜನರನ್ನು ಯಶಸ್ವಿಯಾಗಿ ರಕ್ಷಿಸಿವೆ.ಕೆಲವು ಕುಟುಂಬಗಳು ಮೇಲಿನ ಮಹಡಿಯ ಕೋಣೆಯಲ್ಲಿ ವಾಸ ಮಾಡುತ್ತಿದ್ದರು.

ಘಟನೆಯ ಬಗ್ಗೆ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ದಿಗ್ಭ್ರಾಂತಿ ವ್ಯಕ್ತಪಡಿಸಿದ್ದು, ಘಟನೆಯಲ್ಲಿ Uಯಗೊಂಡಿರುವವರು ಶೀಘ್ರ್ರವಾಗಿ ಚೇತರಿಸಿಕೊಳ್ಳಲಿದೆ ಎಂದು ಹಾರೈಸಿದ್ದಾರೆ.

ತೆಲಂಗಾಣದ ಹೈದರಾಬಾದ್‍ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಪ್ರಾಣಹಾನಿಯಿಂದ ತೀವ್ರ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಅಗ್ನಿ ದುರಂತ ಸಂಭವಿಸಿದ ತಕ್ಷಣ ಘಟನಾ ಸ್ಥಳಕ್ಕೆ ಹನ್ನೊಂದು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಸಹಾಯ ಮಾಡಿದವು. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡ ಕಾರಣ ಹೊಗೆ ಆವರಿಸಿ ಅಲ್ಲಿದ್ದ ಜನರಿಗೆ ಉಸಿರಾಡಲು ಕಷ್ಟವಾಗಿದೆ. 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೂ ಒಂದಷ್ಟು ಮಂದಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.Uಯಗೊಂಡಿರುವವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಇನ್ನೂ ಹಲವರು ಕಟ್ಟಡದಲ್ಲಿ ಸಿಕ್ಕಿಬಿದ್ದಿದ್ದಾರೆ.

ಕಟ್ಟಡಕ್ಕೆ ಸರಿಯಾದ ಪ್ರವೇಶ ಇಲ್ಲದ ಕಾರಣ ಅಗ್ನಿಶಾಮಕ ದಳದವರು ಅಗ್ನಿ ಅವಘಡವನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು ಪಕ್ಕದ ಕಟ್ಟಡಗಳಿಗೆ ಹತ್ತಬೇಕಾಯಿತು. ಸದ್ಯ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗಳು ನಡೆಯುತ್ತಿದ್ದು, ಹೊಗೆಯಿಂದ ತುಂಬಿದ ಕಟ್ಟಡವನ್ನು ಪ್ರವೇಶಿಸಲು ಸಿಬ್ಬಂದಿಗೆ ತೊಂದರೆ ಎದುರಿಸಿದ್ದಾರೆ.

ಗುಲ್ಜಾರ್ ಹೌಸ್‍ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್‍ನಿಂದ ಕಾರ್ಯಾಚರಣೆ ಮುಂದುವರಿದಿದೆ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮಾತನಾಡಿ, “ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಅಗ್ನಿ ಅವಘಡಕ್ಕೆ ತುತ್ತಾದ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ಬೆಂಕಿಯ ಕಾರಣ ಮತ್ತು ನಡೆಯುತ್ತಿರುವ ರಕ್ಷಣಾ ಪ್ರಯತ್ನಗಳ ಬಗ್ಗೆ ವಿಚಾರಿಸಿದರು.ಪ್ರಾಥಮಿಕ ತನಿಖೆಗಳು ಶಾರ್ಟ್ ಸಕ್ರ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಹೇಳುತ್ತವೆ. ಘಟನೆಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

ಮೇ 14 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್‍ನ ಬೇಗಂ ಬಜಾರ್‍ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಿಸಿದ್ದರು.

ಪರಿಹಾರ ಘೋಷಣೆ :
ಹೈದರಾಬಾದ್ ನ ಐತಿಹಾಸಿಕ ಸ್ಮಾರಕ ಚಾರ್ಮಿನಾರ್‍ಗೆ ಸಮೀಪದಲ್ಲಿರುವ ಹೈದರಾಬಾದ್ ಓಲ್ಡ್ ಸಿಟಿಯ ಗುಲ್ಜಾರ್ ಹೌಜ್‍ನಲ್ಲಿರುವ ಶ್ರೀಕೃಷ್ಣ ಪಲ್ರ್ಸ್ ಕಟ್ಟಡದಲ್ಲಿ
ಬಳಿ ಬೆಂಕಿ ಕಾಣಿಸಿಕೊಂಡು ಮಕ್ಕಳು ಸೇರಿದಂತೆ 19 ಜನರು ಸಜೀವ ದಹನಗೊಂಡಿದ್ದು, 30 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಕಾರ್ಯಾಲಯದಿಂದ 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50,000 ರೂಪಾಯಿಗಳ ಪರಿಹಾರವನ್ನು ನೀಡಲಾಗುವುದೆಂದು ತಮ್ಮ ಅಧಿಕೃತ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ, ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಅವರೊಂದಿಗೆ ನಡೆಯುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಪ್ರಧಾನಿ ಸೂಚನೆ ಕೊಟ್ಟಿದ್ದಾರೆ.

RELATED ARTICLES

Latest News