170 ಅಡಿಕೆ ಗಿಡ ಕಡಿದು ನಾಶ ಮಾಡಿದ ಕಿಡಿಗೇಡಿಗಳು

Social Share

ಬೇಲೂರು, ಫೆ.23- ಜಮೀನಿನಲ್ಲಿ ಹುಲುಸಾಗಿ ಬೆಳೆದಿದ್ದ 170ಕ್ಕೂ ಹೆಚ್ಚಿನ ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿ, ಪೈಪ್‍ಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಶಂಭುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್ ಎಂಬುವವರು ಕಳೆದ ಎರಡು ವರ್ಷಗಳಿಂದ ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಆದರೆ
ಸುಮಾರು 170ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡ ರೈತ ಸಂತೋಷ್ ಆತಂಕ ವ್ಯಕ್ತಪಡಿಸಿದ್ದಲ್ಲದೆ, ಕಣ್ಣೀರಿಟ್ಟು ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರೈತ ಸಂತೋಷ್ ಮಾತನಾಡಿ, ಶಂಭುಗನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.138 ರಲ್ಲಿ 2 ರಿಂದ 17 ಎಕರೆ ಜಮೀನನ್ನು ಐದು ವರ್ಷಗಳ ಹಿಂದೆ ತೆಗೆದುಕೊಂಡು ವ್ಯವಸಾಯ ಪ್ರಾರಂಭಿಸಲು ಕೊಳವೆ ಬಾವಿ ತೆಗೆಸಿ, ಒಂದೂವರೆ ವರ್ಷದಿಂದ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದೆವು.
ನಾನು ಬೇಲೂರು ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಹಾಗೂ ಚೆಸ್ ಆಟದ ಬಗ್ಗೆ ಬೆಂಗಳೂರಿನಲ್ಲಿ ತರಬೇತಿ ನೀಡುತ್ತಾ, ಬಿಡುವಿನ ಸಮಯದಲ್ಲಿ ಕಾರ್ಮಿಕರೊಂದಿಗೆ ಕೆಲಸ ಮಾಡಿಸುತ್ತ ಮಕ್ಕಳಂತೆ ಅಡಿಕೆ ಗಿಡಗಳನ್ನು ಬೆಳೆಸಿದ್ದೆವು.
ಆದರೆ, ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಏಕಾಏಕಿ ಗಿಡಗಳನ್ನು ಕತ್ತರಿಸಿ ತುಣಿದು ಹಾಕಿದ್ದಾರೆ. ಹನಿ ನೀರಾವರಿ ಪೈಂಪ್‍ಗಳನ್ನು ಮನಬಂದಂತೆ ತುಣಿದಿದ್ದಾರೆ ಮತ್ತು ಜಮೀನಿನ ಬದಿಯಲ್ಲಿ ಬೆಳೆದ ಗಿಡಗಳನ್ನು ಕಡಿದು, ತಂತಿ ಕಂಬಗಳನ್ನು ಮುರಿದು ಹಾಕಿದ್ದಾರೆ. ಇದರಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕ್ಕಾಗಿ ಪೊಲೀಸ್‍ಠಾಣೆಗೆ ದೂರು ನೀಡಿದ್ದೇನೆ ಎಂದರು.

Articles You Might Like

Share This Article