Monday, March 10, 2025
Homeರಾಜ್ಯಆರೋಗ್ಯ ಇಲಾಖೆಗೆ 17,473 ಕೋಟಿ ಮೀಸಲು

ಆರೋಗ್ಯ ಇಲಾಖೆಗೆ 17,473 ಕೋಟಿ ಮೀಸಲು

17,473 crores reserved for the health department

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರೋಗ್ಯ ವಲಯಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ 17,473 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ವಯೋಮಾನದವರಿಗೂ ವರ್ಗಬೇಧವಿಲ್ಲದೇ, ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ. ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸುವುದು ನಮ ಸಂಕಲ್ಪವಾಗಿದೆ ಎಂದರು.

ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯ ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಲಾಗಿದೆ. ಆಯುಷಾನ್‌ ಯೋಜನೆಯಂತೆ ಆರೋಗ್ಯ ಕರ್ನಾಟಕ ಯೋಜನೆ, ಆಯುಷಾನ್‌ ಭಾರತ್‌ ರೀತಿಯೇ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಫಲಾನುಭವಿಗಳ 5 ಲಕ್ಷ ರೂ. ಚಿಕಿತ್ಸೆಯ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ, ಹೆಚ್ಚುವರಿಯಾಗಿ ಹೃದ್ರೋಗ ಹಾಗೂ ಕ್ಯಾನ್ಸರ್‌ ಖಾಯಿಲೆಗಳಿಗೆ 5 ಲಕ್ಷ ರೂ.ವರೆಗೆ, ಇತರೆ ಖಾಯಿಲೆಗಳಿಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚ ಮರುಪಾವತಿ ಮಾಡಲಾಗುವುದು ಎಂದರು.

ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪೂರಕವಾಗಿ ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ ನಿಗದಿಪಡಿಸಲಾಗುವುದು. ಇದರಡಿ ಆಸ್ಪತ್ರೆಗಳ ಶುಚಿತ್ವ, ಪರಿಕರಗಳ ಖರೀದಿ, ತುರ್ತು ಭಾಗಗಳ ನೕಕರಣ, ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ತರಣೆ ಮಾಡಲಾಗುವುದು. ಹುದ್ದೆಗಳನ್ನು ಪುನರ್‌ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ತಜ್ಞರನ್ನು ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಸಂಭಸುವ ತಾು ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸುತಿುಂದ ಆಡಿಟ್‌ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸುತಿ ಮುಂದೆ ಮಂಡಿಸಲಾಗುವುದು. ಸುತಿಯ ನಿರ್ದೇಶನದಂತೆ ತಾು ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು.

ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಈ ಕೆಳಕಂಡ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ನರವೈಜ್ಞಾನಿಕ ಖಾುಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ ನಿಮ್ಹಾನ್‌್ಸ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಕ್ರಿಟಿಕಲ್‌ ಕೇರ್‌ ಬಾಕ್ಸ್ :
ರಾಜ್ಯದಲ್ಲಿ 50 ಹಾಸಿಗೆ ಸಾಮಥ್ರ್ಯದ 14 ಕ್ರಿಟಿಕಲ್‌ ಕೇರ್‌ ಬ್ಲಾಕ್‌್ಸ ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮಥ್ರ್ಯದ ಒಂದು ಕ್ರಿಟಿಕಲ್‌ ಕೇರ್‌ ಬ್ಲಾಕ್‌್ಸ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
ಸುಟ್ಟ ಗಾಯಗಳ ಚಿಕಿತ್ಸಾ ನೀತಿ, ದೇಶದಲ್ಲೇ ಮೊದಲು: ಸುಟ್ಟ ಗಾಯಗಳ ತಡೆಗಟ್ಟುಕೆ ಹಾಗೂ ಸಂತ್ರಸ್ತರ ಚಿಕಿತ್ಸೆಗೆ ಸಂಬಂಧಿಸಿದಂತೆ, ಸುಟ್ಟ ಗಾಯಗಳ ಚಿಕಿತ್ಸಾ ನೀತಿಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಗೊಳಿಸಲಾಗಿದೆ.

ಪ್ರತಿ ಆಸ್ಪತ್ರೆಯಲ್ಲಿ ಎಂಸಿಹೆಚ್‌ ತಜ್ಞರ ನಿಯೋಜಿಸಲಾಗುವುದು. ಬೆಂಗಳೂರು ಉತ್ತರ ತಾಲೂಕಲ್ಲಿ 150 ಕೋಟಿ ವೆಚ್ಚದಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಾಣ, ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ರಾಜಪೇಟೆಯಲ್ಲಿ 400 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಾಣ ಮತ್ತು ಚಿತ್ರದುರ್ಗದ ಮೊಳಕಾಲೂರಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಾಣದ ಘೋಷಣೆ.

ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ಸೇವೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. 5 ಲಕ್ಷ ವೆಚ್ಚದವರೆಗಿನ ನಗದುರತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗುವುದು. ಮಳೆಯರ ಗರ್ಭ ಕಂಠ ಕ್ಯಾನ್ಸರ್‌ ತಡೆಗಾಗಿ ಲಸಿಕೆ ಯೋಜನೆ ಜಾರಿಗೆ ತರಲಾಗುವುದು. ಆಶಾ ಕಾರ್ಯಕರ್ತೆಯರ ಆರೋಗ್ಯ ಧನವನ್ನು 1 ಸಾವಿರ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಸುತ್ತಿರುವ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿ ವರ್ಗ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ. ಸಿಬ್ಬಂದಿಯ ವೈಯಕ್ತಿಕ ಮಾಸಿಕ ವಂತಿಕೆ 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂ. ಗಳೊಂದಿಗೆ ಸುವರ್ಣ ಆರೋಗ್ಯ ಟ್ರಸ್ಟ್‌ ಮೂಲಕ ಅನುಷ್ಠಾನ ಹಾಗೂ ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾುಲೆಗಳನ್ನು ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

Latest News