ರಾಂಚಿ, ಜು. 29- ಜಾರ್ಖಂಡ್‌ನ ದಿಯೋರ್ಘ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಹಲವಾರು ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವು-ನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಮೃತದೇಹಗಳನ್ನು ದಿಯೋರ್ಘ ಸದರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರ ಪ್ರಕಾರ, 20 ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ದಿಯೋಘರ್‌ನ ಮೋಹನಪುರದ ಜಮುನಿಯಾ ಅರಣ್ಯದ ಬಳಿ, ಕನ್ವಾರಿಯಾ ಕುಟುಂಬವನ್ನು ಹೊತ್ತೊಯ್ಯುತ್ತಿದ್ದ 32 ಆಸನಗಳ ಬಸ್, ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಸಿನ್ಹಾ ಪಿಟಿಐಗೆ ತಿಳಿಸಿದ್ದಾರೆ.
ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್‌ನಲ್ಲಿ, ಪವಿತ್ರ ಶ್ರಾವಣ ಮಾಸದಲ್ಲಿ ಕನ್ವರ್ ಯಾತ್ರೆಯ ಸಮಯದಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ದುರಂತ ಅಪಘಾತದಲ್ಲಿ 18 ಭಕ್ತರು ಪ್ರಾಣ ಕಳೆದುಕೊಂಡರು ಎಂದು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಎಕ್‌್ಸ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಬಾಬಾ ಬೈದ್ಯನಾಥ್ ಅವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ದಿಯೋಘರ್ ಉಪವಿಭಾಗಾಧಿಕಾರಿ ರವಿ ಕುಮಾರ್ ಅವರ ಪ್ರಕಾರ, ಕನ್ವಾರಿಯರು ಬಾಸುಕಿನಾಥ್ ದೇವಸ್ಥಾನಕ್ಕೆ ಹೋಗುತ್ತಿದ್ದರು. ಕನ್ವಾರಿಯರು ಶಿವನ ಭಕ್ತರಾಗಿದ್ದಾರೆ.
- ಬೆಂಗಳೂರಿನಾದ್ಯಂತ ನಾಗರ ಪಂಚಮಿ ಸಂಭ್ರಮ
- ರಾಷ್ಟ್ರಪತಿ ಅಧಿಕಾರ ಕುರಿತ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
- ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಖರ್ಗೆ ಹೇಳಿಕೆ
- ನಟಿ ರಮ್ಯಾ ದೂರಿನ ಬಗ್ಗೆ ಡಿಸಿಪಿ ನೇತೃತ್ವದಲ್ಲಿ ತನಿಖೆ
- ಚಿಕ್ಕಪ್ಪನ ಮನೆಯಲ್ಲೇ ಕಳವು ಆರೋಪಿತೆ ಸೇರಿ ನಾಲ್ವರ ಸೆರೆ, 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ