ಝಾನ್ಸಿ, ಆ. 7 (ಪಿಟಿಐ) ಉತ್ತರ ಪ್ರದೇಶದಲ್ಲಿ ಚಲಿಸುವ ವಾಹನದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಲಲಿತಪುರ ಜಿಲ್ಲೆಯಲ್ಲಿ ಚಲಿಸುವ ಕಾರಿನಲ್ಲಿ 18 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರಿಗೆ ನೀಡಿದ ದೂರಿನಲ್ಲಿ, ನಿತಿನ್ ಠಾಕೂರ್ (22) ಮತ್ತು ಅವನ ಅಪರಿಚಿತ ಸಹಚರರು ತನ್ನ ವಾಹನಕ್ಕೆ ಬಲವಂತವಾಗಿ ಸೇರಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ ಎಂದು ಲಲಿತಪುರದ ಜಖೌರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸುರೇಂದ್ರ ಸಿಂಗ್ ತಿಳಿಸಿದ್ದಾರೆ.
ಠಾಕೂರ್ ಮತ್ತು ಅಪರಿಚಿತ ಯುವಕನ ವಿರುದ್ಧ ಬಿಎನ್ಎಸ್ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಮುಕರ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.ಪೊಲೀಸರ ಪ್ರಕಾರ, ಬಾಲಕಿ ಕಳೆದ ಎರಡು ಮೂರು ತಿಂಗಳಿನಿಂದ ಠಾಕೂರ್ ಜೊತೆ ಸಂಪರ್ಕದಲ್ಲಿದ್ದಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಆರೋಪಿಗಳ ಬಂಧನ ಮತ್ತು ತನಿಖೆಯ ನಂತರ ಇಡೀ ವಿಷಯ ಬೆಳಕಿಗೆ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.