ಬೆಂಗಳೂರು,ಏ.24- ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಗಂಭೀರ ಸ್ವರೂಪದ 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ 23 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 2 ಪ್ರಕರಣಗಳು ದಾಖಲಾಗಿವೆ.
ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿದ್ದು, 8 ಬಿಜೆಪಿ, 6 ಕಾಂಗ್ರೆಸ್ ಹಾಗೂ 1 ಪಕ್ಷೇತರ ಅಭ್ಯರ್ಥಿಗೆ ಸಂಬಂಧಿಸಿದೆ. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಬಳಕೆಗೆ ಸಂಬಂಧಿಸಿದಂತೆ 7 ಬಿಜೆಪಿ, 7 ಕಾಂಗ್ರೆಸ್, ಒಂದು ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.