19ರಿಂದ ಜೀ ಕನ್ನಡ ವಾಹಿನಿಯಲ್ಲಿ ಕಿಚ್ಚ ನಿರ್ಮಾಣದ ‘ವಾರಸ್ದಾರ’ ಧಾರಾವಾಹಿ
ಕಿಚ್ಚ ಸುದೀಪ್ ಈಗಾಗಲೇ ಬಿಗ್ಬಾಸ್ ಮೂಲಕ ಕಿರುತೆರೆ ವೀಕ್ಷಕರ ಮನವನ್ನು ಗೆದ್ದಿದ್ದಾರೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಧಾರವಾಹಿಯೊಂದರ ನಿರ್ಮಾಪಕರೂ ಆಗಿದ್ದಾರೆ. ಕಿಚ್ಚ ಸುದೀಪ್ ನಿರ್ಮಾಣದ ವಾರಸ್ದಾರ ಇದೇ 19 ರಿಂದ ಸೋಮವಾರದಿಂದ ಶುಕ್ರವಾರ ದವರೆಗೆ ಪ್ರತಿರಾತ್ರಿ 7.30 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ನಟಿ ಯಜ್ಞಶೆಟ್ಟಿ ಮೊದಲ ಬಾರಿಗೆ ಸೀರಿಯಲ್ವೊಂದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿ ರುವುದು, ನಟ ರವಿಚೇತನ್ ವೀಣಾ ಪೊನ್ನಪ್ಪ, ರಮೇಶ್ ಪಂಡಿತ್, ವೀಣಾ ವೆಂಕಟೇಶ್, ರಾಮ್ ಸೇರಿದಂತೆ ಹಲವಾರು ಕಲಾವಿದರ ಸಂಗಮದಲ್ಲಿ ವಾರಸ್ದಾರ ರಚನೆ ಯಾಗಿದೆ. ಈಗಾಗಲೇ ಪ್ಲಸ್, ದ್ಯಾವ್ರೇ ನಂಥ ವಿಭಿನ್ನ ನಿರೂಪಣೆಯ ಚಲನಚಿತ್ರಗಳನ್ನು ನಿರ್ದೇಶಿಸಿದ್ದ ಗಡ್ಡವಿಜಿ ಈ ಧಾರಾವಾಹಿಯ ಸಾರಥ್ಯ ವಹಿಸಿಕೊಂಡಿದ್ದಾರೆ.
ಈ ಧಾರಾವಾಹಿಯ ಮತ್ತೊಂದು ಪ್ಲಸ್ ಪಾಯಿಂಟ್ ಎಂದರೆ ಡ್ರಾಮಾ ಜ್ಯೂನಿಯರ್ಸ್ ಮೂಲಕ ನೋಡುಗರ ಮುದ್ದಿನ ಚಿನಕುರುಳಿಯಾಗಿದ್ದ 5 ವರ್ಷದ ಚಿತ್ರಾಲಿ ಪ್ರಮುಖವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು. ಒಂದು ಸಿನಿಮಾ ರೀತಿಯಲ್ಲೇ ನಿರ್ಮಾಣ ಗೊಳ್ಳುತ್ತಿರುವ ಈ ಧಾರವಾಹಿಯಲ್ಲಿ ಸಿನಿಮಾ ತಂತ್ರಜ್ಞ ಕಲಾವಿದರೇ ಬಹುತೇಕ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ವಿಶೇಷ.