Thursday, September 19, 2024
Homeಜಿಲ್ಲಾ ಸುದ್ದಿಗಳು | District News50 ವಿವಾಹಿತ ಪುರುಷನೊಂದಿಗೆ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ, ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ

50 ವಿವಾಹಿತ ಪುರುಷನೊಂದಿಗೆ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ, ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ

ತುಮಕೂರು, ಜೂ.23- ಐವತ್ತು ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಮಾವತ್ತೂರು ಕೆರೆಯ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿದ್ದು, ಕೆರೆಗೆ ಹಾರಿ ಆತಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೊಳಾಲ ಹೋಬಳಿ ಲಕ್ಕಯ್ಯನಪಾಳ್ಯದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ರಂಗಶಾಮಣ್ಣ (50) ಎಂಬುವರನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಕುಟುಂಬದವರು ವಿರೋಧಿಸಿದ ಕಾರಣ ಪ್ರಿಯಕರನ ಜೊತೆ ಕಳೆದ ಮೂರು ದಿನಗಳ ಹಿಂದೆ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದೆ.

ಇಬ್ಬರೂ ನಾಪತ್ತೆಯಾಗಿರುವ ವಿಷಯ ತಿಳಿದು ಕುಟುಂಬಸ್ಥರು ತೀವ್ರ ಶೋಧ ನಡೆಸಿದ್ದಾರೆ. ಆದರೆ ಮಾವತ್ತೂರು ಕೆರೆಯ ದಡದಲ್ಲಿ ಕಾರು, ಇಬ್ಬರ ಚಪ್ಪಲಿ, ಮೊಬೈಲ್‌ ಪತ್ತೆಯಾಗಿದ್ದು, ಆತಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕೊಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಈಜು ತಜ್ಞರು ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ.

RELATED ARTICLES

Latest News