ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಳೆ ಅಧಿಸೂಚನೆ

ಬೆಂಗಳೂರು,ಮಾ.27- ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವಾದ ಎನ್‍ಡಿಎ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನಾಳೆ ಅಯೋಗವು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತಸಮರಕ್ಕೆ ಚಾಲನೆ ಸಿಗಲಿದೆ. ಏ.4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.8ರಂದು … Continue reading ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಳೆ ಅಧಿಸೂಚನೆ