ಉಗಾಂಡದಲ್ಲಿ ಹಿಂಸಾಚಾರದಲ್ಲಿ ಹುತಾತ್ಮರಾದ ಇಬ್ಬರು BSF ಯೋಧರು

Social Share

ಉಗಾಂಡ, ಜು.27- ಗಲಭೆ ಪೀಡಿತ ಉಗಾಂಡದ ಗಡಿ ಪ್ರದೇಶದಲ್ಲಿ ಶಾಂತಿ ಪಾಲನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಭಾರತೀಯ ಬಿಎಸ್‍ಎಸ್ ಪಡೆ ಯೋಧರು ಸಾವನ್ನಪ್ಪಿದ್ದಾರೆ.

ಉಗಾಂಡ ಪೂರ್ವ ನಗರದಲ್ಲಿ ವಿಶ್ವಸಂಸ್ಥೆ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಶಾಂತಿ ಪಾಲನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಹಿಂಸಾಚಾರದ ವೇಳೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಮ್ಮ ವೀರ ಯೋಧರನ್ನು ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿ ದುಷ್ಕರ್ಮಿಗಳನ್ನು ಮಟ್ಟ ಹಾಕಬೇಕಾಗಿದೆ ಎಂದು ವಿದೇಶಾಂಗ ಸಚಿವ ಜಯಶಂಕರ್ ತಿಳಿಸಿದ್ದಾರೆ.

ಬಿನಿ ಪ್ರದೇಶದಲ್ಲಿ ಅಂಗಡಿಗಳಿಗೆ , ಮನೆಗಳಿಗೆಲ್ಲಾ ಬೆಂಕಿ ಹಚ್ಚಲಾಗಿದ್ದು, ವ್ಯಾಪಕ ಹಿಂಸಾಚಾರಗಳು ನಡೆಯುತ್ತಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಶಾಂತಿ ಪಾಲನಾ ಪಡೆ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಮೃತಪಟ್ಟ ಬಿಎಸ್‍ಎಸ್ ಯೋಧರ ಹೆಸರು ಸಧ್ಯಕ್ಕೆ ತಿಳಿದಿಲ್ಲವಾದರೂ ಘಟನೆಯನ್ನು ಭಾರತ ಖಂಡಿಸಿದೆ.

Articles You Might Like

Share This Article