ಹನೂರು,ಆ.21- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮಲೆ ಮಹದೇಶ್ವರಬೆಟ್ಟ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, 33 ದಿನದಲ್ಲಿ 2.20 ಕೋಟಿ ರೂ. ಸಂಗ್ರಹವಾಗಿದೆ.ಸಾಲೂರು ಬೃಹನಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘುರವರ ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, 33 ದಿನದಲ್ಲಿ 2,20,22,454.00/ ಕೋಟಿ ರೂ ನಗದು ರೂಪದಲ್ಲಿ (ಹುಂಡಿ ಮತ್ತು ಇಹುಂಡಿ ಸೇರಿ) ಹಾಗೂ ಚಿನ್ನ 55 ಗ್ರಾಂ, ಬೆಳ್ಳಿ 01 ಕೆ.ಜಿ 627 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಈ ಬಾರಿಯೂ 30 ವಿದೇಶಿ ನೋಟುಗಳು ಮತ್ತು 2 ಸಾವಿರ ಮುಖಬೆಲೆ 7 ನೋಟುಗಳು ಹುಂಡಿಯಲ್ಲಿ ದೊರೆತಿದೆ. ಭಕ್ತರಿಂದ ಹರಕೆ ರೂಪದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂದಿರುವುದು ಅಮಾವಾಸ್ಯೆ, ಹುಣ್ಣಿಮೆ, ರಜೆ ದಿನಗಳು, ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರ ಉಚಿತ ಪ್ರಯಾಣ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ, ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ರೇತ್ರಕ್ಕೆ ಭೇಟಿ ನೀಡಿದ್ದರಿಂದ ದೊಡ್ಡ ಮೊತ್ತದ ಹಣ ಸಂಗ್ರಹವಾಗಿದೆ.
ಪ್ರಾಧಿಕಾರದ ಉಪ ಕಾರ್ಯದರ್ಶಿ ಜಿ.ಎಲ್.ಚಂದ್ರಶೇಖರ, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಸಿ.ಮಹದೇವು, ಲೆಕ್ಕಾಧೀಕ್ಷಕ ಗುರು ಮಲ್ಲಯ್ಯ, ಸರಗೂರು ಮಹದೇವಸ್ವಾಮಿ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಸಮಂತ್ ಕುಮಾರ್, ಪ್ರ.ದ.ಸ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಮರಿಸ್ವಾಮಿ ಹಾಜರಿದ್ದರು.
- ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು
- ರೈಲುಗಳ ಶೌಚಾಲಯಗಳಲ್ಲಿ ನೀರಿನ ಕೊರತೆ ಕುರಿತು 1 ಲಕ್ಷಕ್ಕೂ ಹೆಚ್ಚು ದೂರು : ಸಿಎಜಿ ವರದಿ
- ತ್ರಿವಳಿ ಕೊಲೆಗೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ದೆಹಲಿ
- 33 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ 2 ಕೋಟಿ ಕಾಣಿಕೆ ಸಂಗ್ರಹ
- ಭಾರತಕ್ಕೆ ಪಲಾಯನ ಮಾಡಿದ್ದ ಎಫ್ಬಿಐನ ಟಾಪ್-10 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮಹಿಳೆ ಬಂಧನ