ವಲಸೆ ಕಾರ್ಮಿಕರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ಇಬ್ಬರ ಸಾವು

Social Share

ಶ್ರೀನಗರ. ಅ, 18- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲಾಯಲ್ಲಿ ಮುಂಜಾನೆ ಭಯೋತ್ಪಾದಕರು ವಲಸೆ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಭಧ್ರತಾ ಪಡೆ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‍ಇಟಿ) ಉಗ್ರ ಸಂಘಟನೆಯ ಭಯೋತ್ಪಾದಕನೊಬ್ಬನ್ನು ಶೋಧ ಬಂಧಿಸಲಾಗಿದೆ ಎಂದು ಅವರು ಪೊಲೀಸರು ಹೇಳಿದರು.

ಬಂಧಿತ ಭಯೋತ್ಪಾದಕನನ್ನು ಹರ್ಮೆನ್ ಮೂಲದ ಇಮ್ರಾನ್ ಬಶೀರ್ ಗನಿ ಎಂದು ಗುರುತಿಸಲಾಗಿದೆ. ಶೋಪಿಯಾನ್‍ನ ಹರ್ಮೆನ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದು, ಉತ್ತರ ಪ್ರದೇಶದ ಕನೌಜ್ ನಿವಾಸಿಗಳಾದ ಮೋನಿಷ್ ಕುಮಾರ್ ಮತ್ತು ರಾಮ್ ಸಾಗರ್ ಎಂಬ ಇಬ್ಬರು ಕಾರ್ಮಿಕರು ಗಾಯಗೊಂಡರು ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಿದರು ಅಲ್ಲಿ ಮೃತಪಟ್ಟಿದ್ದಾರೆ.

ಪ್ರದೇಶವನ್ನು ಸುತ್ತುವರಿದಿದ್ದು ಇನ್ನಿತರ ದಾಳಿಕೋರರನ್ನು ಹಿಡಿಯಲುಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ ಸ್ಥಳೀಯ ಭಯೋತ್ಪಾದಕರು ದಾಳಿ ಮಾಡಿ ನಂತರ ಯಾವುದೇ ಕುರುಹುಗಳನ್ನು ಬಿಡದೆ ತಮ್ಮ ದಿನನಿತ್ಯದ ಜೀವನಕ್ಕೆ ಮರಳುತ್ತಾರೆ ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ತಿಳಿಸಿದ್ದಾರೆ.

Articles You Might Like

Share This Article