Friday, October 11, 2024
Homeರಾಷ್ಟ್ರೀಯ | Nationalಗುಂಡಿಕ್ಕಿ ಮಾಜಿ ಸೈನಿಕನ ಹತ್ಯೆ, ಹಂತಕರನ್ನು ಹೊಡೆದು ಕೊಂದ ಗುಂಪು

ಗುಂಡಿಕ್ಕಿ ಮಾಜಿ ಸೈನಿಕನ ಹತ್ಯೆ, ಹಂತಕರನ್ನು ಹೊಡೆದು ಕೊಂದ ಗುಂಪು

ರೋಹ್ತಾಸ್, ನ.16- ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನನ್ನು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಗುಂಪೊಂದು ಹೊಡೆದು ಕೊಂದಿದೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ, ಆತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಜಿ ಸೈನಿಕ ಬಿಜೇಂದ್ರ ಸಿಂಗ್ (55) ಎಂದು ಗುಂಡಿಗೆ ಬಲಿಯಾಗಿದ್ದು, ಗುಂಪಿನಿಂದ ಹತ್ಯೆಗೀಡಾದ ಇಬ್ಬರನ್ನು ಮಿಥಿಲೇಶ್ ಕುಮಾರ್ (23) ಮತ್ತು ಆದಿತ್ಯ ಕುಮಾರ್ (25) ಎಂದು ಗುರುತಿಸಲಾಗಿದೆ. ಮೂರನೇ ದಾಳಿಕೋರನನ್ನು ಅಜೀತ್ ಕುಮಾರ್ ಎಂದು ತಿಳಿದು ಬಂದಿದೆ.

ಬುಧವಾರ ಬೆಳಗ್ಗೆ 9.45ರ ಸುಮಾರಿಗೆ ಕಲ್ಯಾಣಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬೈಕ್‍ನಲ್ಲಿ ಬಂದ ಮೂವರು ಶಸ್ತ್ರಧಾರಿ ದುಷ್ಕರ್ಮಿಗಳು ನಿವೃತ್ತ ಸೇನಾ ಯೋಧ ಬಿಜೇಂದ್ರರನ್ನು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗುತ್ತಿದ್ದರು. ಸ್ಥಳೀಯ ನಿವಾಸಿಗಳು ಮೂವರು ದಾಳಿಕೋರರನ್ನು ಹಿಂಬಾಲಿಸಿ, ಹಿಡಿದು ಹಲ್ಲೆ ನಡೆಸಿದ್ದಾರೆ. ಗ್ರಾಮಸ್ಥರು ಹಿಡಿದಾಗ ದಾಳಿಕೋರರು ಗ್ರಾಮಸ್ಥರ ಮೇಲೂ ಗುಂಡು ಹಾರಿಸಿದ್ದಾರೆ. ಇದರಿಂದ ಅಂಕಿತ್ ಕುಮಾರ್ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ.

ಆಸ್ತಿಗಾಗಿ ಪತ್ನಿಯನ್ನೇ ಕೊಂದು ನಾಟಕವಾಡಿದ್ದ ಉಪನ್ಯಾಸಕ ಅರೆಸ್ಟ್

ಬಿಜೇಂದ್ರ ಸಿಂಗ್ ಅವರು ಸ್ಥಳದಲ್ಲೇ ಸಾವನ್ನಪ್ಪಿದರು, ಶಸ್ತ್ರಸಜ್ಜಿತ ದಾಳಿಕೋರರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಮಿಥಿಲೇಶ್ ಕುಮಾರ್ ಮತ್ತು ಆದಿತ್ಯ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಮಾಜಿ ಸೈನಿಕನ ಹತ್ಯೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಬಿಜೇಂದ್ರ ಸಿಂಗ್ ಹತ್ಯೆಯ ಹಿಂದಿನ ನಿಗೂಢತೆಯನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಂತರದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಕಾರಣವಾದ ಘಟನೆಯನ್ನು ಗುಂಪು ಹತ್ಯೆ ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‍ಪಿ ತಿಳಿಸಿದ್ದಾರೆ.

RELATED ARTICLES

Latest News