ಸುಪ್ರೀಂಕೋರ್ಟ್‍ಗೆ ಮತ್ತಿಬ್ಬರು ನ್ಯಾಯಮೂರ್ತಿಗಳ ನೇಮಕ

Social Share

ನವದೆಹಲಿ,ಫೆ.10-ಹೈಕೋರ್ಟ್‍ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಾೀಧಿಶರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿರುವ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.

ಒಂದು ವಾರದ ಹಿಂದಷ್ಟೇ ಐವರು ನ್ಯಾಯಾೀಧಿಶರನ್ನು ಸುಪ್ರೀಂ ಕೋರ್ಟ್‍ಗೆ ನೇಮಕ ಮಾಡಿದ ಬೆನ್ನಲ್ಲೆ ಮತ್ತಿಬ್ಬರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿರುವುದರಿಂದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾೀಧಿಶರ ಸಂಖ್ಯೆ 34ಕ್ಕೇ ಏರಿಕೆಯಾಗಿದೆ.

ಪಂಜಾಬ್‍ನ ಗಡಿಯಲ್ಲಿ ಚೀನಾ ಮೇಡ್ ಶಸ್ತ್ರಾಸ್ತ್ರ, ಡ್ರಗ್ಸ್ ಎಸೆದ ಪಾಕ್ ಡ್ರೋನ್

ಭಾರತದ ಸಂವಿಧಾನದ ಅಡಿಯಲ್ಲಿ ನಿಬಂಧನೆಗಳ ಪ್ರಕಾರ, ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಈ ಕೆಳಗಿನ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‍ನ ನ್ಯಾಯಾೀಧಿಶರನ್ನಾಗಿ ನೇಮಿಸಿದ್ದಾರೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 31 ರಂದು ಶಿಫಾರಸು ಮಾಡಿದ್ದ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಹೊಸ ನ್ಯಾಯಮೂರ್ತಿಗಳನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅಭಿನಂದಿಸಿದ್ದಾರೆ.

ಇಸ್ರೋ ಮತ್ತೊಂದು ಮೈಲಿಗಲ್ಲು : ಬಾಹ್ಯಾಕಾಶದ ಕಕ್ಷೆ ಸೇರಿದ 3 ಉಪಗ್ರಹಗಳು

ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲï, ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲï, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ , ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಾೀಧಿಶ ಮನೋಜ್ ಮಿಶ್ರಾ ಅವರುಗಳು ವಾರದ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

2 New Judges, Supreme Court, Regains, Full Strength,

Articles You Might Like

Share This Article