ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸರ ಬಂಧನ

Social Share

ಪಾಲ್ಘರ್, ನ.29- ಇಲ್ಲಿ ವ್ಯಕ್ತಿಯೊಬ್ಬರಿಂದ 10 ಸಾವಿರ ರೂ ಲಂಚ ಪಡೆದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.

ಪಾಲ್ಘರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಕಾನ್ಸ್‍ಟೇಬಲ್‍ಗಳು ನಿಷೇಧಿತ ತಂಬಾಕು ಉತ್ಪನ್ನಗಳ ಸಾಗಣೆಗೆ ಅವಕಾಶ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚದ ಕೇಳಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನವನಾಥ್ ಜಗತಾಪ್ ಹೇಳಿದರು.

ಪ್ರೇಕ್ಷಕರ ಮನ ಗೆದ್ದ ‘ಸದ್ದು ವಿಚಾರಣೆ ನಡೆಯುತ್ತಿದೆ’

ಈ ಬಗ್ಗೆ ಎಸಿಬಿಗೆ ದೂರು ದಾಕಲಾಗಿ ದಹಾನು ರೋಡ್ ರೈಲ್ವೆ ನಿಲ್ದಾಣದಲ್ಲಿ ಲಂಚದ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಅಪರಾಧಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

2 policemen, arrested, bribe, Palghar,

Articles You Might Like

Share This Article