ಪಶ್ಚಿಮ ಬಂಗಾಳ : ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

Social Share

ಕೋಲ್ಕತ್ತಾ, ಆ. 18-ಅಲ್ ಖೈದಾ ಸಂಘಟನೆಯ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಉತ್ತರ 24 ಪರಗಣ ಜಿಲ್ಲಾಯಲ್ಲಿ ಶಾಸನ್ ಪೊಲೀಸ್ ಠಾಣಾ ವ್ಯಾಪ್ತಿಯ ಖರಿಬರಿ ಪ್ರದೇಶದಲ್ಲಿ ಕಳೆದ ರಾತ್ರಿ ದಾಳಿ ನಡೆಸಿ ಭಯೋತ್ಪಾದಕ ಸಂಘಟನೆಯೊಂದಿಗೆ ತೊಡಗಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರಲ್ಲಿ ಒಬ್ಬರು ದಕ್ಷಿಣ ದಿನಾಜ್ಪುರ ಜಿಲ್ಲಾಯ ಗಂಗಾರಾಮ್ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಹೂಗ್ಲಿಯ ಅರಾಂಬಾಗಿನಿಂದ ಬಂದವರು ಎಂದು ತಿಳಿಸಿದ್ದಾರೆ, ದಾಳಿಯ ಸಮಯದಲ್ಲಿ ಭಾರತದ ವಿರುದ್ಧ ಯುದ್ಧ ಸಾರುವ ಅತ್ಯಂತ ಮೂಲಭೂತವಾದ ಚಿಂತನೆಗಳನ್ನು ಒಳಗೊಂಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಬ್ಬರನ್ನು ವಿಚಾರಣೆಗೊಳಪಡಿಸಿದ ನಂತರ, ಕನಿಷ್ಠ 17 ಸದಸ್ಯರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿದುಬಂದಿದ್ದು ಕಾರ್ಯಾಚರಣೆ ಆರಂಭಿಸಲಾಗಿದೆ.

Articles You Might Like

Share This Article