2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಅಗತ್ಯ

Social Share

ಬೆಂಗಳೂರು, ಜ.4- ಕೊರೊನಾ ಲಸಿಕೆಯನ್ನು 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಮಾತ್ರವಲ್ಲ, 2 ವರ್ಷ ಮೇಲ್ಪಟ್ಟ ಮಕ್ಕಳಿಗೂ ನೀಡಬೇಕಾದ ಅಗತ್ಯವಿದೆ ಎಂದು ಹಿರಿಯ ಮಕ್ಕಳ ತಜ್ಞ ಡಾ.ಸುರೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕದಂತೆ ಮೂರನೆ ಅಲೆಯಲ್ಲಿ ಮಕ್ಕಳಿಗೇ ಹೆಚ್ಚು ಸೋಂಕು ತಗುಲುವ ಸಂಭವವಿದೆ.
ಅಮೆರಿಕದಲ್ಲಿ ಈಗಾಗಲೇ 2 ರಿಂದ 15 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಅದರಂತೆ ಇಲ್ಲಿಯೂ ಕೂಡ ಲಸಿಕೆ ನೀಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮೂರನೆ ಅಲೆ ಸಂಭವ ಖಚಿತವಾದಂತಿದೆ. ಓಮಿಕ್ರಾನ್ ಜತೆಗೆ ದಿನದಿಂದ ಕೊರೊನಾ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಮೂರನೆ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗುಲುತ್ತಿರುವುದು ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಮಕ್ಕಳಿಗೆ ಲಸಿಕೆ ನೀಡಲು ಮುಂದಾಗಿದೆ.
ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲಿದೆ. ಆದರೆ, ಸೋಂಕಿನ ತೀವ್ರತೆ ಕಡಿಮೆ ಇರಲಿದೆ. ಮಕ್ಕಳಿಗೆ ಸೋಂಕು ಗಂಭೀರವಲ್ಲದೆ ಇರಬಹುದು. ಆದರೆ, ಮಕ್ಕಳು ಸೂಪರ್ ಸ್ಪೈಡರ್ ಆಗುವ ಸಾಧ್ಯತೆಯಿದೆ. ಸೋಂಕು ತಗುಲಿದ ಮಕ್ಕಳಿಂದ ದೊಡ್ಡವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹರಡಬಹುದು.
ಮನೆಯಲ್ಲಿರುವ ವಯಸ್ಕರಿಗೂ ಕೂಡ ತೊಂದರೆ ಉಂಟಾಗಬಹುದು. ಅಮೆರಿಕದಂತೆ ಇಲ್ಲೂ ಮಕ್ಕಳಿಗೆ ಹೆಚ್ಚು ಸೋಂಕು ತಗುಲುವ ಸಾಧ್ಯತೆ ಇದೆ. ಇನ್ನೊಂದು ತಿಂಗಳಲ್ಲಿ ಇದರ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

Articles You Might Like

Share This Article