Monday, May 19, 2025
Homeಬೆಂಗಳೂರುಬೆಂಗಳೂರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17 ಲಕ್ಷ ರೂ. ವಶ

ಬೆಂಗಳೂರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17 ಲಕ್ಷ ರೂ. ವಶ

ಬೆಂಗಳೂರು, ಮಾ.17- ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೆ ಎಲ್ಲೆಡೆ ಕಟ್ಟೆಚ್ಚರ ವಹಿಸಿರುವ ಪೊಲೀಸರು ದಾಖಲೆ ಇಲ್ಲದ ಸಾಗಿಸುತ್ತಿದ್ದ 17 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಅಶೋಕ ನಗರ ರೆಸಿಡೆನ್ಸಿ ರಸ್ತೆಯಲ್ಲಿ ನಿನ್ನೆ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ಹಾಗೂ ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಸ್ ಟೋಲ್ ಬಳಿ 7 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕನಗರ ರೆಸಿಡೆನ್ಸಿ ರಸ್ತೆಯಲ್ಲಿ ನಿನ್ನೆ ರಾತ್ರಿ ಚೆಕ್‍ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾಗ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂ. ಪತ್ತೆಯಾಗಿದೆ. ಇದು ಕೋಳಿ ಮಾರಾಟದಿಂದ ಬಂದ ಹಣ ಎಂದು ಹೇಳಲಾಗಿದೆ. ಸದ್ಯ ಪೊಲೀಸರು ಕಾರು ಮತ್ತು ಹಣವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಸ್ ಟೋಲ್ ಬಳಿ ಬೋರ್‍ವೆಲ್ ಡೀಲರ್ ರಘುಪತಿ ಎಂಬುವವರಿಂದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.ಬೆಂಗಳೂರಿನಿಂದ ತುಮಕೂರಿಗೆ ಹೋಗುತ್ತಿದ್ದಾಗ ಜಾಸ್ ಟೋಲ್ ಬಳಿ ಈ ಹಣ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Latest News