ಜೈಸಲೇರ್. ಅ.14 (ಪಿಟಿಐ) ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಜೈಸಲ್ಮೇರ್‌ನಿಂದ ಜೋಧ್‌ಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ವಾಹನದ ಹಿಂಭಾಗದಿಂದ ಹೊಗೆ ಹೊರಬರಲು ಪ್ರಾರಂಭಿಸಿತು.ಇದನ್ನು ಗಮನಿಸಿದ ಚಾಲಕ ಬಸ್ ಅನ್ನು ನಿಲ್ಲಿಸಿದನು, ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡಿ ಬಸ್‌ಗೆ ಆವರಿಸಿತು.
ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಿದರು. ಸೇನಾ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು. ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು ಮತ್ತು ಗಾಯಾಳು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜೈಸಲ್ಮೇರ್‌ನ ಜವಾಹರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಗಂಭೀರವಾಗಿ ಗಾಯಗೊಂಡ 16 ಪ್ರಯಾಣಿಕರನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಬೆಂಕಿಯಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೋಕರನ್ ಬಿಜೆಪಿ ಶಾಸಕ ಪ್ರತಾಪ್ ಪುರಿ ಪಿಟಿಐಗೆ ತಿಳಿಸಿದ್ದಾರೆ. ಬಸ್‌ನಲ್ಲಿ ಹತ್ತೊಂಬತ್ತು ಪ್ರಯಾಣಿಕರು ಸಾವನ್ನಪ್ಪಿದರು ಮತ್ತು ಜೋಧಪುರಕ್ಕೆ ಹೋಗುವ ದಾರಿಯಲ್ಲಿ ಒಬ್ಬರು ಸುಟ್ಟ ಗಾಯಗಳಿಂದ ಸಾವನ್ನಪ್ಪಿದರು ಎಂದು ಅವರು ಹೇಳಿದರು.
ಜೈಸಲ್ಮೇರ್‌ನಿಂದ ಹೊರಟ 10 ನಿಮಿಷಗಳ ನಂತರ ಬಸ್ ಬೆಂಕಿಗೆ ಆಹುತಿಯಾಯಿತು ಎಂದು ಶಾಸಕರು ಹೇಳಿದರು.ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಜೈಸಲ್ಮೇರ್ ತಲುಪಿದರು ಮತ್ತು ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಜೈಸಲ್ಮೇರ್‌ನಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಈ ದುರಂತ ಅಪಘಾತದಲ್ಲಿ ಹಾನಿಗೊಳಗಾದವರಿಗೆ ನಾನು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಬಲಿಪಶುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಎಕ್‌್ಸ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಈ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.