ಬೆಂಗಳೂರು, ಮಾ.7– ಅಲ್ಪಸಂಖ್ಯಾತ ಮತ್ತು ಹಿಂದುಳಿದವರ ಓಲೈಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯೂ ಮನಸು ಮಾಡಿದ್ದಾರೆ. ಗುತ್ತಿಗೆ ಕಾಮಗಾರಿ ನೀಡಿಕೆಯಲ್ಲಿನ ಮೀಸಲಾತಿ ಜೋತೆಗೆ ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಮುಸ್ಲಿಂರಿಗೆ ಶೇ.20 ರಷ್ಟು ಮೀಸಲಾತಿ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗುತ್ತಿಗೆ ಕಾಮಗಾರಿ ನೀಡಿಕೆಯಲ್ಲಿ ಮುಸ್ಲಿಂ ಮತ್ತು ಹಿಂದುಳಿದವರಿಗೆ ಎರಡು ಕೋಟಿ ರೂ.ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ನೀಡುವುದಾಗಿ ಅವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ ನೀಡುವುದಾಗಿ ಅವರು ಪ್ರಕಟಿಸಿದ್ದಾರೆ.