ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು

Social Share

ಬಾಲಸೋರ್, ಜ.18- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲ 28 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಪೋಸ್ಕೋ ನ್ಯಾಯಾಲಯದ ವಿಶೇಷ ನ್ಯಾಯಾೀಧಿಶ ರಂಜನ್ ಕುಮಾರ್ ಸುತಾರ್ ಅವರು ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಸಿಂಗ್‍ನಿಗೆ 14,000 ರೂಪಾಯಿ ದಂಡದೊಂದಿಗೆ ಶಿಕ್ಷೆ ವಿಧಿಸಿದ್ದಾರೆ.

ತಮ್ಮ 14 ವರ್ಷದ ಅಪ್ರಾಪ್ತ ಮಗಳ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಆಕೆ ಆರೋಗ್ಯ ಸಮಸ್ಯೆಗಳಿಂದು ಬಳಲುತ್ತಿದ್ದಾಳೆ ಎಂದು ಸಂತ್ರಸ್ತೆಯ ತಾಯಿ 2020ರ ಫೆಬ್ರವರಿಯಲ್ಲಿ ದೂರು ನೀಡಿದ್ದರು. ಅದರ ಆಧಾರದ ಮೇಲೆ ಕಮರಖಾಲಿ ಗ್ರಾಮದ ಸಂತೋಷ್ ಸಿಂಗ್‍ನನ್ನು ಪೊಲೀಸರು ಬಂಧಿಸಿದ್ದರು.

ಜಮ್ಮುವಿನಲ್ಲಿ ಶಂಕಿತ ಉಗ್ರರ ಎನ್‍ಕೌಂಟರ್ ಪ್ರಕರಣ : ನ್ಯಾಯಾಂಗ ತನಿಖೆಗೆ ಆದೇಶ

ವಿಚಾರಣೆ ವೇಳೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೋಷಿಗೆ ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 14,000 ರೂ. ದಂಡ ವಿಧಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಂತ್ರಸ್ತಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

20-year, rigorous, imprisonment, minor, rape, Chandigarh,

Articles You Might Like

Share This Article