2000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಆದೇಶ

Supreme-Court

ನವದೆಹಲಿ,ಜ.4-ವಿಚಾರಣೆಗೆ ಬಂದಿರುವ ಮೇಲ್ಮನವಿ ಅರ್ಜಿಗಳು ಇತ್ಯರ್ಥವಾಗವವರೆಗೂ ತಮಿಳುನಾಡಿಗೆ ದಿನನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದನ್ನು ಮುಂದುವರೆಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಇಂದು ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಇಂದು ಈ ಆದೇಶ ನೀಡಿದ್ದು, ಕರ್ನಾಟಕದ ಮೇಲೆ ಮತ್ತೊಮ್ಮೆ ಗದಾಪ್ರಹಾರ ನಡೆಸಿದೆ.   ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ಈ ಆದೇಶ ನೀಡಿರುವುದು ಕರ್ನಾಟಕಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಫೆಬ್ರವರಿ 7ರಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬರಲಿದ್ದು , ವಿಚಾರಣೆ ನಡೆದು ಪ್ರಕರಣ ಇತ್ಯರ್ಥವಾಗುವವರೆಗೂ ನಿತ್ಯ ಎರಡು ಸಾವಿರ ಕ್ಯೂಸೆಕ್ ನೀರು ಹರಿಸುವುದನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ನ್ಯಾಯಾಲಯ ತಾಕೀತು ಮಾಡಿದೆ.   ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕೃಷಿ ಬೆಳೆಗಳಿಗೆ ಮತ್ತು ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಜಿಲ್ಲೆಗಳ ಕುಡಿಯುವ ನೀರಿಗೆ ಸಂಕಷ್ಟ ಉಂಟಾಗಿದ್ದು, ಕೆಆರ್‍ಎಸ್ ಸೇರಿದಂತೆ ವಿವಿಧ ಜಲಾಶಯಗಳಲ್ಲಿ ಹಾಲಿ ಇರುವ ನೀರು ಮುಂದಿನ ಮುಂಗಾರು ಮಳೆ ಬೀಳುವವರೆಗೂ ಕುಡಿಯಲು ಸಾಕಾಗುವುದಿಲ್ಲ. ಹಾಗಾಗಿ ನೀರು ಹರಿಸುವ ವಿಷಯದಲ್ಲಿ ಆದೇಶವನ್ನು ಬದಲಾವಣೆ ಪಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Sri Raghav

Admin