2019ರ ಲೋಕಸಭೆ ಚುನಾವಣೆಗಾಗಿ ಮೋದಿ ಸಾರಥ್ಯದಲ್ಲಿ ಈಗಿನಿಂದಲೇ ಎನ್‍ಡಿಎ ತಯಾರಿ

Modi-and-Amith-Shah

ನವದೆಹಲಿ,ಏ.11-ಮುಂದಿನ 2019ರ ಲೋಕಸಭೆ ಚುನಾವಣೆಗಾಗಿ ಬಿಜೆಪಿ ನೇತೃತ್ವದ ಎನ್‍ಡಿಎ ಇಂದಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲೇ 2019ರ ಚುನಾವಣೆ ಎದುರಿಸಲು ತೀರ್ಮಾನ ಕೈಗೊಂಡಿದೆ. ಸುಮಾರು 4 ಗಂಟೆಗಳ ಕಾಲ ನಡೆದ ಸುದೀರ್ಘ ಎನ್‍ಡಿಎ ಸಭೆಯಲ್ಲಿ 2019 ರ ಲೋಕಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ಎದುರಿಸಬೇಕೆಂಬ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ 2019ರ ಚುನಾವಣೆ ಎದುರಿಸು ಪ್ರಸ್ತಾವನೆಯನ್ನು ಮಂಡಿಸಿದರು.

ಇದಕ್ಕೆ ಇಡೀ ಎನ್‍ಡಿಎ ಮಿತ್ರ ಪಕ್ಷಗಳು ಸರ್ವಾನುಮತದ ಒಪ್ಪಿಗೆ ಸೂಚಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಬಡವರ ಪರವಾದ ಕಾರ್ಯಸೂಚಿಯನ್ನು ಒತ್ತಿ ಹೇಳಿದ್ದು, ದೇಶದ ಬಡವರ್ಗದ ಜನತೆ ತಮ್ಮ ಸರ್ಕಾರದ ಮೇಲಿಟ್ಟಿರುವ ಭರವಸೆಯನ್ನು ಹುಸಿಯಾಗಲು ಬಿಡಬಾರದು ಎಂದು ಸಚಿವರು, ಎನ್‍ಡಿಎ ಮೈತ್ರಿಕೂಟದ ನಾಯಕರಿಗೆ ಕರೆ ನೀಡಿದ್ದಾರೆ.  ಅಲ್ಲದೇ, ತಮ್ಮ ನವ ಭಾರತ ಅಜಂಡಾವನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಮೋದಿ, ಯುವ ಜನತೆಯ ಸಂಪರ್ಕದಲ್ಲಿರುವಂತೆ ಮಿತ್ರ ಪಕ್ಷಗಳಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಬಿಜೆಪಿಯನ್ನು ಆಗಾಗ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುವ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರೊಂದಿಗೆ ಸಭೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 20 ನಿಮಿಷಗಳ ಕಾಲ ಪ್ರತ್ಯೇಕ ಸಭೆ ನಡೆಸಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ.  ನವ ಭಾರತದ ಅಜೆಂಡಾವನ್ನು ಮುಂದಿಟ್ಟುಕೊಂಡು 2019ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯುವಜನತೆಯೊಂದಿಗೆ ಹೆಚ್ಚು ಬೆಸೆಯಲು ಮಿತ್ರ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಇದೇ ವೇಳೆ ಚುನಾವಣಾ ಸುಧಾರಣೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಸುಧಾರಣೆಯನ್ನು ಜಾರಿಗೆ ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿಸಲು ಎನ್‍ಡಿಎ ಮಿತ್ರಪಕ್ಷಗಳು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.  ಸಭೆಯಲ್ಲಿ ಶಿವಸೇನೆ ಸೇರಿದಂತೆ ಬಿಜೆಪಿ ಮಿತ್ರ ಪಕ್ಷಗಳ ಎನ್‍ಡಿಎ ನಾಯಕರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin