Friday, November 28, 2025
Homeಬೆಂಗಳೂರುಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಟೆಕ್ಕಿ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಟೆಕ್ಕಿ ಸಾವು

Techie dies after bike hits divider

ಬೆಂಗಳೂರು,ನ.27-ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಅಟ್ಟೂರು ಲೇಔಟ್‌ ನಿವಾಸಿ ಆನಂದ್‌ (35) ಮೃತಪಟ್ಟ ಟೆಕ್ಕಿ. ಇವರು ಚಿಂತಾಮಣಿ ಮೂಲದವರು.

ಮಾನ್ಯತಾ ಟೆಕ್‌ಪಾರ್ಕ್‌ನ ಸಾಫ್ಟ್ ವೇರ್‌ ಕಂಪನಿಯೊಂದರಲ್ಲಿ ಆನಂದ್‌ ಅವರು ಸಾಫ್‌್ಟವೇರ್‌ ಎಂಜಿನಿಯರ್‌ ವೃತ್ತಿ ಮಾಡುತ್ತಿದ್ದರು. ರಾತ್ರಿ 10.30 ರ ಸುಮಾರಿನಲ್ಲಿ ಆನಂದ್‌ ಅವರು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ನ್ಯಾಯಾಂಗ ಬಡಾವಣೆ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸಮೇತ ಉರುಳಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ರಕ್ತ ಸ್ರಾವವಾಗಿದೆ.

ತಕ್ಷಣ ಸಾರ್ವಜನಿಕರು ಗಮನಿಸಿ ಆಂಬ್ಯುಲೆನ್‌್ಸಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ರಸ್ತೆ ಕಾಮಗಾರಿಯಿಂದಾಗಿ ಟ್ರಾಫಿಕ್‌ ಜಾಮ್‌ ಆಗಿದ್ದರಿಂದ ಆಂಬ್ಯುಲೆನ್‌್ಸ ಮುಂದೆ ಸಾಗಲು ಸಾಧ್ಯವಾಗಿಲ್ಲ.ಹಾಗಾಗಿ ಹರಸಾಹಸಪಟ್ಟು ಗಾಯಾಳು ಆನಂದ್‌ ಅವರನ್ನು ಕಾರಿನಲ್ಲಿ ಅಂಡರ್‌ಪಾಸ್‌‍ಮೂಲಕ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.

ಈ ಬಗ್ಗೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಟೆಕ್ಕಿ ಆನಂದ್‌ ಅವರಿಗೆ ಸೂಕ್ತ ಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರೆ ಅವರನ್ನುಉಳಿಸಬಹುದಿತ್ತೆಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಈ ಮಾರ್ಗದಲ್ಲಿ ಮೆಟ್ರೋ ಹಾಗೂ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಪ್ರತಿನಿತ್ಯ ಸಂಚಾರಿ ದಟ್ಟಣೆ ಉಂಟಾಗುತ್ತಿದೆ. ಬೆಂಗಳೂರಿಗೆ ಬರುವ ಒಂದು ಮಾರ್ಗದ ರಸ್ತೆಯನ್ನು ಮುಚ್ಚಲಾಗಿದೆ. ಈ ಬಗ್ಗೆ ಸಚಿವ ಕೃಷ್ಣಭೈರೇಗೌಡ ಅವರು ಸಭೆ ನಡೆಸಿ ಮೆಟ್ರೋ ಹಾಗೂ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿ, ರಸ್ತೆಯಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಸಾಮಾಗ್ರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸೂಚನೆ ನೀಡಿದ್ದಾರೆ. ಈ ನಡುವೆಯೇ ನಿನ್ನೆ ರಾತ್ರಿ ಅಪಘಾತದಿಂದಾಗಿ ಟೆಕ್ಕಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿರುವುದು ವಿಷಾದಕರ.

RELATED ARTICLES

Latest News