ನವಾಡ, ಸೆ.19-ಜಮೀನು ವಿವಾದದ ತೀವ್ರ ಮಟ್ಟಕ್ಕೆ ಹೋಗಿ ಅಲ್ಲಿದ್ದ 21 ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ಮಾಂಝಿ ತೋಲಾದ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮುಫಾಸಿಲ್ ಠಾಣೆ ಪೊಲೀಸರು ತಿಳಿಸಿದ್ದಾರೆ .
ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು.ಕಳೆದ ರಾತ್ರಿಮಾಂಝಿ ಟೋಲಾದಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಬಂದು ಪೊಲೀಸರೊಂದಿಗೆ ಸೇರಿ ಬೆಂಕಿಯನ್ನು ನಂದಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ, ಕೆಲ ಜನರ ಗುಂಪು ಮನೆಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಎಸ್ಪಿ ಅಭಿನವ್ ಧಿಮಾನ್ ಹೇಳಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಘಟನೆಗೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಮನೆಗಳಿಗೆ ಬೆಂಕಿ ಹಚ್ಚುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಯಿತು ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಮತ್ತು ಘರ್ಷಣೆ ಭುಗಿಲೆದ್ದಂತೆ ತಡೆಯಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಧೀಮಾನ್ ಹೇಳಿದರು.