ಬೆಂಗಳೂರು, ಜ.10- ಕೊರೊನಾ ಸೋಂಕು ಪೊಲೀಸರನ್ನು ಬಿಟ್ಟು ಬಿಡದೆ ಕಾಡುತ್ತಿದ್ದು, ಇಂದು 22 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದುವರೆಗೂ 124 ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ ಆರು ಮಂದಿ ಗುಣಮುಖರಾಗಿ ತೆರಳಿದ್ದರೆ, ಉಳಿದ 118 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
# ವೀಕೆಂಡ್ ಕಫ್ರ್ಯೂ ಉಲ್ಲಂಘನೆ 63 ವಾಹನ ವಶಕ್ಕೆ
ಬೆಂಗಳೂರು, ಜ.10- ವೀಕೆಂಡ್ ಕಫ್ರ್ಯೂ ಇದ್ದರೂ ಸಹ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ 63 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪೈಕಿ 61 ದ್ವಿಚಕ್ರ ವಾಹನಗಳು, ಮೂರು ಚಕ್ರದ ಒಂದು ವಾಹನ ಹಾಗೂ ನಾಲ್ಕು ಚಕ್ರದ ಒಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ನಗರದಲ್ಲಿ ವೀಕೆಂಡ್ ಕಫ್ರ್ಯೂ ಜಾರಿಮಾಡಿದ್ದರೂ ಸಹ ನಿನ್ನೆ ರಾತ್ರಿ 8 ಗಂಟೆಯಿಂದ ಇಂದು ಮುಂಜಾನೆವರೆಗೂ ಅನಗತ್ಯವಾಗಿ ರಸ್ತೆಗಿಳಿದಿದ್ದ ವಾಹನಗಳನ್ನು ವಶಕ್ಕ ಪಡೆಯಲಾಗಿದೆ.
